ಯುಪಿಎ ಅವಧಿಯಲ್ಲಿ ಅನೇಕ ಸರ್ಜಿಕಲ್ ಸ್ಟ್ರೈಕ್ಸ್ ನಡೆದಿದ್ದವು: ಮನಮೋಹನ್ ಸಿಂಗ್

ನವದೆಹಲಿ, ಮೇ 2: ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಎರಡು ಅವಧಿಗಳಲ್ಲಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿಗಳು ನಡೆದಿದ್ದವು ಎಂದು ಕಾಂಗ್ರೆಸ್‌ನ ಕೆಲವು ನಾಯಕರು ಹೇಳಿಕೊಂಡಿದ್ದರು.


ಪಠಾಣ್‌ಕೋಟ್ ದಾಳಿಯ ಬಳಿಕ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತದ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪುಲ್ವಾಮಾ ದಾಳಿಯ ಬಳಿಕವೂ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ನಾಶಮಾಡಿತ್ತು. ಇದರಿಂದ ಎನ್‌ಡಿಎ ಸರ್ಕಾರದ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಆಡಳಿತಾರೂಢ ಬಿಜೆಪಿ ಕೂಡ ಇದು ತನ್ನ ಸಾಧನೆ ಎಂದು ಬಿಂಬಿಸಿಕೊಂಡಿದೆ.

ಈ ನಡುವೆ ಯುಪಿಎ ಸರ್ಕಾರದ ಎರಡೂ ಅವಧಿಗಳಲ್ಲಿ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಅವರು, ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮೌನ ಮುರಿದಿದ್ದಾರೆ.

ಸೇನಾ ಕಾರ್ಯಾಚರಣೆಯನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ ನಡೆ ನಾಚಿಕೆಗೇಡು ಮತ್ತು ಒಪ್ಪುವಂಥದ್ದಲ್ಲ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಅನೇಕ ಬಾರಿ ಸರ್ಜಿಕಲ್ ಸ್ಟ್ರೈಕ್‌ಗಳು ನಡೆದಿದ್ದವು ಎಂದು ಅವರು 'ಹಿಂದೂಸ್ತಾನ್ ಟೈಮ್ಸ್' ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

Comments