ಮುಖ್ಯಮಂತ್ರಿ ಎದುರಿಗೆ ಬಂತು ಬಿಜೆಪಿ ಕಡೆಯಿಂದ 10 ಪ್ರಶ್ನೆಗಳು !! ಪ್ರಶ್ನೆ ಪಟ್ಟಿ ನೋಡಿ ದಂಗಾದ ಸಿಎಂ



: ವಾಸ್ತವವಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದು, ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸೋಮವಾರ ನಗರದ ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹಿಂದಿನ ಗ್ರಾಮ ವಾಸ್ತವ್ಯದ ವೈಫಲ್ಯಗಳ ಮಾಹಿತಿಯುಳ್ಳ ಕಿರು ಹೊತ್ತಿಗೆ 'ಹಿಂದೆ, ಈವರೆಗೆ, ಈಗ' ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇಟ್ಟುಕೊಂಡಿದ್ದು, ಇದಕ್ಕಾಗಿಯೇ ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಆದರೆ, ಅವರು ವಿನಾಕಾರಣ ಬಿಜೆಪಿ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಬೇಕೆಂದು ಹೇಳಿದರು.


Comments