ರಾಜ್ಯದಲ್ಲಿ ದೋಸ್ತಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ನಾಯಕರು ನಡೆಸುತ್ತಿರುವ ಪ್ರಯತ್ನ ಈಗ ಕ್ಲೈಮಾಕ್ಸ್ ಹಂತ ತಲುಪಿದ್ದು, ಇಬ್ಬರು ಪಕ್ಷೇತರ ಶಾಸಕರು ಸೇರಿದಂತೆ ಒಟ್ಟು 10 ಮಂದಿ ನಮ್ಮ ಜೊತೆ ಬರಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.
ಶಾಸಕರುಗಳ ಹೆಸರುಗಳನ್ನು ಬಹಿರಂಗಪಡಿಸಲು ನಿರಾಕರಿಸಿರುವ ಈ ನಾಯಕರು, ಇಂದು ಸಂಜೆ ಒಳಗಾಗಿ 10 ಮಂದಿ ಶಾಸಕರುಗಳು ಮುಂಬೈಗೆ ಬಂದು ನಮ್ಮೊಂದಿಗೆ ಸೇರಿಕೊಳ್ಳಲಿದ್ದಾರೆ. ಆ ಬಳಿಕ ಅಸಲಿ ಆಟ ಆರಂಭವಾಗಲಿದೆ ಎಂದಿದ್ದಾರೆ.
ಈ ಮಧ್ಯೆ ದೆಹಲಿಯಲ್ಲಿ ಬೀಡು ಬಿಟ್ಟಿರುವ ರಾಜ್ಯ ಬಿಜೆಪಿ ನಾಯಕರು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದು, ಎಷ್ಟು ಮಂದಿ ಕಾಂಗ್ರೆಸ್ ಶಾಸಕರುಗಳು ರಾಜೀನಾಮೆ ನೀಡಲು ಮುಂದಾಗಲಿದ್ದಾರೆ ಎಂಬುದು ಖಚಿತಪಟ್ಟ ಬಳಿಕವಷ್ಟೇ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
Comments
Post a Comment