ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ, ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇನ್ನು ಇದೇ ವೇಳೆ ತಮ್ಮ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ದಿನಾಂಕ ಫಿಕ್ಸ್ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕಾರ್ಯ ಪ್ರವೃತ್ತರಾಗಿರುವ ಪ್ರಧಾನಿ ಮೋದಿ, ಹಲವು ಅಭಿವೃದ್ಧಿ ಕಾರ್ಯಗಳ ಪೂರ್ಣಗೊಳಿಸುವಿಕೆಗೆ 2022ನ್ನು ಡೆಡ್‌ಲೈನ್ ಎಂದು ಪರಿಗಣಿಸಿದ್ದಾರೆ.
ಪ್ರಮುಖವಾಗಿ ಗೃಹ ನಿರ್ಮಾಣ, ರಸ್ತೆ ನಿರ್ಮಾಣ, ಕುಡಿಯುವ ನೀರು ಮುಂತಾದ ಜನಸಾಮಾನ್ಯರ ಬೇಡಿಕೆಗಳನ್ನು ಈಡೇರಿಸಲು ಪ್ರಧನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಮುಂದಾಗಿದೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಲವು ಬಾರಿ ಮಿಶನ್ 2022 ಕುರಿತು ಪ್ರಸ್ತಾಪಿಸಿದ್ದರು. ಅದರಂತೆ ಈಗಾಗಲೇ ಕ್ಯಾಬಿನೆಟ್ ಸಚಿವರ ಸಮಿತಿ ರಚೆನಾಯಗಿದ್ದು, ಮಿಶನ್ 2022 ಮೇಲೆ ಗಮನ ಕೇಂದ್ರೀಕರಿಸಲಾಗಿದೆ ಎಂದು ತಿಳಿದುಬಂದಿದೆ.
ಅಲ್ಲದೇ ಈ ಸಮಿತಿಗೆ 1 ಸಾವಿರ ದಿನದ ಯೋಜನೆಯ ನೀಲನಕ್ಷೆ ಸಿದ್ದಪಡಿಸಲು ಪ್ರಧಾನಿ ಮೋದಿ ಆದೇಶ ನೀಡಿದ್ದಾರೆ. ಒಟ್ಟು 75 ಯೋಜನೆಗಳನ್ನು 2022ರೊಳಗಾಗಿ ಪೂರ್ಣಗೊಳಿಸಲು ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಹೇಳಲಾಗುತ್ತಿದೆ.
Comments
Post a Comment