ಬಿಗ್ ನ್ಯೂಸ್...!! 6 ಕಾಂಗ್ರೆಸ್ ಶಾಸಕರು ರಾಜೀನಾಮೆ- ಬಿಜೆಪಿಗೆ ಸೇರ್ಪಡೆಗೆ ಮುಹೂರ್ತ ನಿಗದಿ..!!ಮತ್ತಷ್ಟು ಬಲಿಷ್ಠವಾಗುತಿರ್ವ ಬಿಜೆಪಿ
ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ಸಭೆ ಮೇಲೆ ಸಭೆ ನಡೆಸಿ ಕಾರ್ಯತಂತ್ರ ರೂಪಿಸಿದ್ದಾರೆ. ಇದರ ಭಾಗವಾಗಿಯೇ ಸಂಪುಟ ವಿಸ್ತರಣೆಗೆ ಮುಂದಾಗಿದ್ದರಾದರೂ ಹಿರಿಯ ಕಾಂಗ್ರೆಸ್ ನಾಯಕರ ಅಸಮಾಧಾನ ಸ್ಪೋಟಗೊಂಡಿದ್ದ ಕಾರಣ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗಿದೆ.
ಆದರೆ, ಸರ್ಕಾರ ರಚನೆ ಪ್ರಯತ್ನವನ್ನು ಕೈ ಬಿಟ್ಟಿರುವುದಾಗಿ ಹೇಳುತ್ತಲೇ ಬಿಜೆಪಿ ಆಪರೇಷನ್ ಕಮಲಕ್ಕೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಬಿಜೆಪಿ ಸೇರುವ ಅನ್ಯ ಪಕ್ಷದ ಶಾಸಕರಿಗೆ ಗೆಲುವು ಗ್ಯಾರಂಟಿ ಎನ್ನುವುದು ಉಮೇಶ್ ಜಾಧವ್ ಪ್ರಕರಣದಲ್ಲಿ ಸಾಬೀತಾಗಿದೆ ಎಂದು ಬಿಜೆಪಿ ನಾಯಕರು ಹೇಳಿದ್ದು, ಆಪರೇಷನ್ ಕಮಲಕ್ಕೆ ಆಹ್ವಾನ ನೀಡಿದ್ದಾರೆ
ಈ ನಡುವೆ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ 6 ಮಂದಿ ಕಾಂಗ್ರೆಸ್ ಶಾಸಕರು ಜೂನ್ 9 ರಂದು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಡಿದೆ. ಹಿರಿಯ ನಾಯಕರ ಆಕ್ರೋಶದಿಂದ ಕಂಗಾಲಾಗಿರುವ ಕಾಂಗ್ರೆಸ್ ನಾಯಕರು ಸಂಪುಟ ವಿಸ್ತರಣೆ ಮುಂದೂಡಿದ್ದಾರೆ. ಇಬ್ಬರು ಪಕ್ಷೇತರ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ಶಾಸಕರೊಬ್ಬರು ಸಚಿವರಾಗಲಿದ್ದಾರೆ ಎನ್ನಲಾಗಿದೆ.

ಇನ್ನು ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಜೂನ್ 9 ರಂದು 6 ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ. ಜೂನ್ 8 ರಂದು ಶಾಸಕರೆಲ್ಲ ಸೇರಿ ಸಭೆ ನಡೆಸಿ ಜೂನ್ 9 ರಂದು ರಾಜೀನಾಮೆ ನೀಡಲು ತೆರೆಮರೆಯಲ್ಲಿ ಚಟುವಟಿಕೆಗಳು ನಡೆದಿವೆ ಎನ್ನಲಾಗಿದೆ.
Comments
Post a Comment