ಬಿಜೆಪಿ ಆಡಳಿತಕ್ಕೆ ಬರೋದು ಖಚಿತ!!ಕಂಗೆಟ್ಟ ಮೈತ್ರಿ ಸರ್ಕಾರ



ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ. ನನ್ನ ಪಕ್ಷದ ಘಟನೆ-ಗೌರವವನ್ನು ಎತ್ತಿ ಹಿಡಿಯುತ್ತೇನೆ. ಅತ್ಯಂತ ಶೀಘ್ರವಾಗಿ ಕರ್ನಾಟಕದಲ್ಲೂ ಕೂಡ ನಮ್ಮ ಸರ್ಕಾರ ಬರುತ್ತದೆ ಅಂತ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೊಸ ಬಾಂಬ್‌ ಸಿಡಿಸಿದ್ದಾರೆ.

ಅವರು ಇಂದು ಬೆಂಗಳೂರಿನ ಬಂಟರ ಸಂಘದಲ್ಲಿ ಮಾತನಾಡುತ್ತ ಅವರು ಈ ವಿಷಯ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ , ಸರ್ಕಾರ ಸತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಬರ ಇರುವಾಗ ಅಮೆರಿಕಾ ಪ್ರವಾಸ ಬೇಕಿತ್ತಾ? ಕರ್ನಾಟಕ ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಇದನ್ನು ಬಹಳ ಸಮಯ ಸಹಿಸಿಕೊಳ್ಳಲು ಸಾದ್ಯವಿಲ್ಲ. ಯಾವ ಸಮಯದಲ್ಲಾದರೂ ಸರ್ಕಾರ ಬೀಳಬಹುದು ಅಂತ ಹೇಳಿದ ಅವರು ಈ ಮೂಲ ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಡಿವಿಎಸ್ ಆಪರೇಷನ್ ಕಮಲದ ಬಗ್ಗೆ ಪರೋಕ್ಷವಾಗಿ ಹೇಳಿದರು.


Comments