ಬಿಗ್ ನ್ಯೂಸ್: ಬಿಜೆಪಿಯ ಅಧ್ಯಕ್ಷರಾಗಿ ಮುಂದುವರಿದ ಅಮಿತ್ ಶಾ....ಕಾರ್ಯಧ್ಯಕ್ಷರಾಗಿ ಇನ್ನೋರ್ವ ಬಿಜೆಪಿ ಸದಸ್ಯ ಆಯ್ಕೆ..???




ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ನಡ್ಡಾ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರನ್ನು ಡಿಸೆಂಬರ್ ವರೆಗೆ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಸಲು ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಹಲವಾರು ಚುನಾವಣೆಗಳಲ್ಲಿ ಜಯ ಸಾಧಿಸಿದೆ. ಅವರು ಗೃಹ ಸಚಿವರಾದ ಕಾರಣ ಬೇರೆಯವರಿಗೆ ಸ್ಥಾನ ನೀಡುವಂತೆ ತಿಳಿಸಿದ್ದರು. ಆದರೆ, ಅವರನ್ನೇ ಅಧ್ಯಕ್ಷರಾಗಿ ಮುಂದುವರೆಸಲು ತೀರ್ಮಾನಿಲಾಗಿದೆ. ಜೆ.ಪಿ. ನಡ್ಡಾ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

Comments