ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಯುವಕ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಈಗ ಯುವಕ ಬರೆದ ಪತ್ರಕ್ಕೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ.
ರಾಯಚೂರಿನ ಲಿಂಗಸುಗೂರು ತಾಲೂಕಿನ ದೇವರ ಭೂಪೂರು ಗ್ರಾಮದ ಯುವಕ ಅಮರೇಶ್ ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಪತ್ರ ಬರೆದಿದ್ದರು. ಗಲಗಿನ ದೊಡ್ಡಿ, ಕಾಳಪ್ಪನ ದೊಡ್ಡಿ ಹಾಗೂ ಗುಳೆದರ ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ನೀಡುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದರು.
ಅಮರೇಶ್ ಬರೆದ ಪತ್ರಕ್ಕೆ ಸ್ಪಂದಿಸಿದ ಮೋದಿ, ಮೂರು ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕಕ್ಕೆ ಆದೇಶ ನೀಡಿದ್ದಾರೆ. ಈ ಮೂರು ದೊಡ್ಡಿಗಳಿಗೆ ಕೇಂದ್ರ ಗ್ರಾಮೀಣ ವಿದ್ಯುದ್ದೀಕರಣ ನಿಗಮದಿಂದ ವಿದ್ಯುತ್ ಸಂಪರ್ಕಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೆ ಜೆಸ್ಕಾಂ ಇಲಾಖೆಯಿಂದ ವಿದ್ಯುತ್ ಸಂಪರ್ಕ ಕಾರ್ಯ ಪ್ರಾರಂಭವಾಗಿದೆ. ಅಲ್ಲದೆ ಕೇಂದ್ರ ಸರ್ಕಾರದ ಸೌಭಾಗ್ಯ ಯೋಜನೆ ಅಡಿಯಲ್ಲಿ ಮೀಟರ್ ಅಳವಡಿಕೆ ಕಾರ್ಯ ಆರಂಭವಾಗಿದೆ.
Comments
Post a Comment