ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಮಂಡ್ಯ ಲೋಕಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಪಾಲಾಗಿದ್ದು, ಇಲ್ಲಿಯೂ ಬಿಜೆಪಿ ಅವರನ್ನು ಬೆಂಬಲಿಸಿತ್ತು ಎಂಬುದು ಗಮನಾರ್ಹ. ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದೊಂದು ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದವು.
ಕರ್ನಾಟಕದಲ್ಲಿನ ಈ ಅಭೂತಪೂರ್ವ ಗೆಲುವು ಕುರಿತು ಬಿಜೆಪಿ ನಾಯಕರಿಗೇ ನಂಬಿಕೆ ಇರಲಿಲ್ಲವೆಂಬುದು ಈಗ ಬಹಿರಂಗವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೇ ಸಾಗರದಲ್ಲಿ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಕಾರ್ಯಕ್ರಮದಲ್ಲಿ ಈ ವಿಷಯ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಲೋಕಸಭಾ ಚುನಾವಣೆಯಲ್ಲಿ ನಾವು ಕನಿಷ್ಠ 22 ಸ್ಥಾನ ಗೆಲ್ಲುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮಾತು ಕೊಟ್ಟಿದ್ದೆ.
ಆದರೆ ಅವರು ಅದನ್ನು ನಂಬಿರಲಿಲ್ಲ ಎಂದು ಹೇಳಿದ್ದಾರೆ. ರಾಜ್ಯದ ಜನತೆ ನಮಗೆ ಆಶೀರ್ವದಿಸಿದ ಕಾರಣ ಪಕ್ಷೇತರ ಅಭ್ಯರ್ಥಿಯ ಗೆಲುವೂ ಸೇರಿದಂತೆ 26 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
Comments
Post a Comment