ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಷಣ ಮಾಡಿದ್ದಾರೆ.
ರಾಷ್ಟ್ರಪತಿಯವರ ಭಾಷಣ ದೇಶದ ಸಾಮಾನ್ಯ ಆಶೋತ್ತರಗಳ ಪ್ರತಿಧ್ವನಿಯಾಗಿದೆ. ದೇಶದ ಜನರ ಆಶೋತ್ತರಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಚರ್ಚೆಯಲ್ಲಿ ಭಾಗಿಯಾದವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಭಾಷಣದ ಮೂಲಕ ಭರವಸೆಯನ್ನು ನೀಡಿದ್ದೇವೆ. ಸದೃಢ. ಸುಭದ್ರ ರಾಷ್ಟ್ರ ನಿರ್ಮಾಣ ಮಾಡಲಿದ್ದು, ಭಾರತವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ. ಸಾಮಾನ್ಯ ಜನರ ಕನಸು ನನಸು ಮಾಡುತ್ತೇವೆ. ಎಲ್ಲ ಸವಾಲುಗಳನ್ನು ಮೆಟ್ಟಿ ನಿಲ್ಲುತ್ತೇವೆ. ದೇಶದ ಜನರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡುತ್ತೇವೆ.
Comments
Post a Comment