ಮೋದಿ ಸರ್ಕಾರದಿಂದ ವಾಹನ ಸವಾರರಿಗೆ ಭರ್ಜರಿ ಗಿಫ್ಟ್!!



ನೂತನ ಸಾರಿಗೆ ಸಚಿವ ನಿತಿನ್ ಗಡ್ಕರಿ ದೇಶದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಹೌದು ಛತ್ತಿಸಗಢದ ಸಮಾರಂಭವೊಂದರಲ್ಲಿ ಮಾತನಾಡಿದ ಗಡ್ಕರಿ, ಸಧ್ಯದಲ್ಲೇ ದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 55 ರೂಪಾಯಿ ಹಾಗೂ ಡಿಸೇಲ್ ಬೆಲೆ 50 ರೂಪಾಯಿ ಆಗಲಿದೆ ಎಂದಿದ್ದಾರೆ.
ದೇಶದಲ್ಲಿ ಒಟ್ಟಾರೆ 5 ಎಥೆನಾಲ್ ಉತ್ಪಾದನಾ ಘಟಕಗಳನ್ನು ಕೇಂದ್ರ ಸರ್ಕಾರ ತೆರೆಯಲಿದ್ದು, ಇವು ಕಾರ್ಯಾರಂಭ ಮಾಡಿದ ನಂತರ ದೇಶದಲ್ಲಿ ತೈಲಬೆಲೆ ಇಳಿಕೆಯಾಗಲಿದೆ . ಅಲ್ಲದೆ ನಗರ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳಿಂದ ಭತ್ತ ಹಾಗೂ ಗೋಧಿಯ ಹುಲ್ಲು, ಕಬ್ಬು ಇನ್ನಿತರ ಕೃಷಿಯಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಬಳಸಿ ಇಂಧನ ಉತ್ಪತ್ತಿ ಮಾಡಬಹುದು. ಎಥೆನಾಲ್, ಮೆಥೆನಾಲ್, ಬಯೋ ಇಂಧನ ಮತ್ತು ಸಿಎನ್‍ಜಿ ಬಳಕೆ ಹೆಚ್ಚಾದಂತೆ ಪೆಟ್ರೋಲ್ ಮೇಲಿನ ಅವಲಂಬನೆ  ಕಡಿಮೆಯಾಗಲಿದ್ದು ಇದರಿಂದ ತೈಲ ಬೆಲೆ ಇಳಿಕೆಯಾಗಲಿದೆ ಎಂದರು.
ಜೊತೆಗೆ ಛತ್ತೀಸ್‍ಗಢದಲ್ಲಿ ತೆರೆಯಲಾದ ಜತ್ರೋಪಾ ಘಟಕದಿಂದ ಉತ್ಪಾದನೆಯಾದ ಜೈವಿಕ ಇಂಧನವನ್ನು ಉಪಯೋಗಿಸಿ ಪ್ರಥಮ ಬಾರಿಗೆ ದೇಶದಲ್ಲಿ        ವಿಮಾನವನ್ನು  ಹಾರಿಸಲಾಗಿದೆ.ಪೆಟ್ರೋಲ್ ಮತ್ತು ಡೀಸೆಲ್ ನನ್ನು 8 ಲಕ್ಷ ಕೋಟಿ ರೂ. ಮೌಲ್ಯಕ್ಕೆ ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವುದರಿಂದ ತೈಲ ಬೆಲೆ ಮತ್ತಷ್ಟು ಏರಿಕೆಯಾಗುತ್ತಿದೆ. ಅಲ್ಲದೆ ಇದರಿಂದ ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಅಲ್ಲದೆ . ರೈತರು ಆದಿವಾಸಿಗಳ ಸಹಾಯದಿಂದ ಎಥೆನಾಲ್, ಮೆಥೆನಾಲ್, ಬಯೋ- ಇಂಧನವನ್ನು ತಯಾರಿಸಬಹುದು. ಇವುಗಳನ್ನು ವಿಮಾನ ಹಾರಾಟಕ್ಕೂ ಬಳಸಬಹುದು ಎಂದು ಹೇಳಿದರು.
ಕಳೆದ ಸೋಮವಾರ ಜೈವಿನ ಇಂಧನ ಬಳಸಿದ್ದ ಸ್ಪೈಸ್ ಜೆಟ್ ವಿಮಾನ ಡೆಹ್ರಾಡೂನ್‍ನಿಂದ ದೆಹಲಿಗೆ ಆಗಮಿಸಿದ್ದು,ಶೇ. 75 ಜೆಟ್ ಇಂಧನ ಹಾಗೂ ಶೇ. 25 ಜೈವಿಕ ಇಂಧನ ಬಳಸಲಾಗಿತ್ತು. ಸ್ಪೈಸ್ ಜೆಟ್‍ನ ಬೊಂಬಾರ್ಡಿಯರ್ ಕ್ಯೂ400 ವಿಮಾನವನ್ನು ಈ ಪ್ರಯೋಗಕ್ಕೆ ಬಳಸಲಾಗಿತ್ತು. ಸದ್ಯಕ್ಕೆ ಅಮೆರಿಕ ಮತ್ತು ಆಸ್ಟ್ರೇಲಿಯಾದಲ್ಲಿ ವಿಮಾನಗಳು ಜೈವಿಕ ಇಂಧನವನ್ನು ಬಳಸುತ್ತಿವೆ.

Comments