ಮೋದಿ ಬತ್ತಳಿಕೆಯಿಂದ ಹೊಸ ಅಸ್ತ್ರ:ಅಂತಿಮ ದಿನದೆಡೆಗೆ ಕಾಂಗ್ರೆಸ್



ಬೆಂಗಳೂರಿನ ಲೋಕ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ, 25ರಲ್ಲಿ ಗೆಲುವು ಪಡೆಯುತ್ತೇವೆ ಎಂಬ ದೃಢಚಿತ್ತದಿಂದ ಕೆಲಸ ಮಾಡಬೇಕು' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ನೂತನ ಸಂಸದರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು.

ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ನೂತನ ಸಂಸದರಿಗೆ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, 'ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು 171 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿತ್ತು. ಪಕ್ಷ ಸಂಘಟನೆ ಮತ್ತಷ್ಟು ಗಟ್ಟಿಗೊಳಿಸಬೇಕು ಮತ್ತು ಸದಸ್ಯತ್ವ ನೋಂದಣಿ ಅಭಿಯಾನವನ್ನು ಮತ್ತೊಮ್ಮೆ ಆರಂಭಿಸಬೇಕು. ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ಪ್ರತಿಯೊಬ್ಬರನ್ನೂ ಪಕ್ಷದ ಸದಸ್ಯರನ್ನಾಗಿ ಮಾಡಬೇಕು' ಎಂದು ಅವರು ಹೇಳಿದರು.


Comments