ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಶೀಘ್ರವೇ ಪತನವಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಶೀಘ್ರದಲ್ಲಿಯೇ ರಚನೆಯಾಗಲಿದೆ. ಆಗ ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಇರಲಿದೆ ಎಂದು ಕೇಂದ್ರ ರಾಸಾಯನಿಕ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ.
ನಗರದ ಬಂಟರ ಸಂಘದಲ್ಲಿ ಶನಿವಾರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಿದರೂ ಕೆಲವೇ ಕೆಲವು ಸ್ಥಾನಗಳ ಕೊರತೆಯಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಆದರೆ ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬುದು ಬಹುತೇಕರ ಒತ್ತಾಸೆಯಾಗಿದೆ. ಕಾರ್ಯಕರ್ತರ ಬಹುದಿನಗಳ ಕನಸು ಶೀಘ್ರದಲ್ಲಿಯೇ ನನಸಾಗಲಿದೆ.
Comments
Post a Comment