ಅತೀ ಹೆಚ್ಚು ಜನಮೆಚ್ಚಿದ ವ್ಯಕ್ತಿ ಯಾರು ಎಂಬ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದಲ್ಲಿ ಮೋದಿ ಎಷ್ಟನೇ ಸ್ಥಾನದಲ್ಲಿದ್ದಾರೆ ಗೊತ್ತಾ!?
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ವಿಶೇಷವಾದ ಕಾರ್ಯವೈಖರಿಯಿಂದ ಭಾರತ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಪ್ರಸಿದ್ದಿಯಾಗಿರುವವರು. ಮೂರು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಅಲ್ಲಿ ಮಾಡಿದ್ದ ಅಭಿವೃದ್ಧಿ ಕೆಲಸದಿಂದಾಗಿ ಜನಪ್ರಿಯತೆಯ ತುತ್ತ ತುದಿಯಲ್ಲಿದ್ದ ಮೋದಿ ಬಳಿಕ ಪ್ರಚಂಡ ಬಹುಮತದೊಂದಿಗೆ ಪ್ರಧಾನಿಯಾಗಿ ಅಧಿಕಾರಕ್ಕೆ ಏರಿದ ಮೋದಿ ಜನರ ನಿರೀಕ್ಷೆ ಹುಸಿ ಮಾಡದೇ ನವಭಾರತ ನಿರ್ಮಾಣಕ್ಕೆ ಕಾರಣರಾದವರು. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪ್ರಚಂಡವಾಗಿ ದಿಗ್ವಿಜಯ ಗಳಿಸಿ ಪ್ರಧಾನಿಯಾಗಿ ಎರಡನೇ ಅವಧಿಗೆ ಆಯ್ಕೆಯಾಗಿರೋದು ಹಳೆ ವಿಚಾರ.
ಇದೀಗ ಪ್ರಸಕ್ತ ವರ್ಷದಲ್ಲಿ ಭಾರತದಲ್ಲಿ ಅತ್ಯಂತ ಹೆಚ್ಚು ಪ್ರಖ್ಯಾತಿಗೆ ಒಳಗಾಗಿರೋ ವ್ಯಕ್ತಿ ಯಾರು ಎಂಬ ಬಗ್ಗೆ ಲಂಡನ್ ನ ಯು-ಗವ್ ಸಂಸ್ಥೆ ಸಮೀಕ್ಷೆ ನಡೆಸಿದ್ದು ಇದರಲ್ಲಿ ಪ್ರಧಾನಿ ಮೋದಿಯವರು ಅತೀ ಹೆಚ್ಚು ಜನರು ಮೆಚ್ಚಿದ ಭಾರತೀಯ ಎಂಬ ಪ್ರಖ್ಯಾತಿಗೆ ಪಾತ್ರರಾಗಿದ್ದಾರೆ.
Comments
Post a Comment