ಬೆಂಗಳೂರು : ಟಿಪ್ಪು ಜಯಂತಿ ರದ್ದುಗೊಳಿಸಿ ರಾಜ್ಯ ಸರಕಾರ ದೇಶ ಹೊರಡಿಸಿದೆ.ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ವಿರಾಜಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿ, ಈ ಸಂಬಂಧ ಆದೇಶ ಹೊರಡಿಸಲಾಯಿತು.ತಮ್ಮ ಬಿಜೆಪಿ ಪಕ್ಷ ಪಕ್ಷ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು. ಇದೀಗ ಈ ನಿಟ್ಟಿನಲ್ಲಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.
Comments
Post a Comment