ಬಿಗ್ ನ್ಯೂಸ್: ನಿಂತಿಲ್ಲ ಆಪರೇಷನ್ ಕಮಲ, ಇನ್ನಷ್ಟು ಶಾಸಕರ ರಾಜೀನಾಮೆ.?

ಬೆಂಗಳೂರು: ಕಾಂಗ್ರೆಸ್ ಪಕ್ಷದ 12 ಹಾಗೂ ಜೆಡಿಎಸ್ ಪಕ್ಷದ ಮೂವರು ಶಾಸಕರು ರಾಜೀನಾಮೆ ನೀಡಿದ್ದಾರೆ. ಆದರೆ, ಇನ್ನೂ ರಾಜೀನಾಮೆ ಅಂಗೀಕಾರವಾಗಿಲ್ಲ.
ಶಾಸಕರನ್ನು ಕಾಯ್ದುಕೊಳ್ಳುವುದೇ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಸವಾಲಾಗಿದೆ. ಹೀಗಿರುವಾಗಲೇ ಇನ್ನಷ್ಟು ಶಾಸಕರು ಪಕ್ಷ ತೊರೆದು ಬಿಜೆಪಿ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿನ ಶಾಸಕರಿಂದ ರಾಜೀನಾಮೆ ಕೊಡಿಸಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಹೇಳಲಾಗಿದೆ.
ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರು ರಾಜೀನಾಮೆ ಅಂಗೀಕಾರ ಮಾಡಿದ್ದರೆ ರಾಜೀನಾಮೆ ಕೊಡುವ ಶಾಸಕರ ಸಂಖ್ಯೆ ಇನ್ನಷ್ಟು ಜಾಸ್ತಿಯಾಗುತ್ತಿತ್ತು. ಆದರೆ ವಿಚಾರಣೆ ಬಳಿಕ ನಿಯಮಾನುಸಾರ ರಾಜೀನಾಮೆ ಅಂಗೀಕರಿಸುವ ಬಗ್ಗೆ ಸ್ಪೀಕರ್ ಹೇಳಿದ್ದು ಕೆಲವು ಶಾಸಕರು ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದಾರೆ.

Comments