ಬೆಂಗಳೂರು: ಸಿದ್ದರಾಮಯ್ಯ ಆಪ್ತ ಶಾಸಕ ಎಂಟಿಬಿ ನಾಗರಾಜ್ ಮನವೊಲಿಸಲು ನಿನ್ನೆ ಇಡೀ ದಿನ ಕಾಂಗ್ರೆಸ್ ನಾಯಕರು ಕಸರತ್ತು ನಡೆಸಿದ್ದರು. ಆದರೆ, ಇಂದು ಬೆಳಗ್ಗೆ ಎಂಟಿಬಿ ನಾಗರಾಜ್ ಕೂಡಾ ಮುಂಬೈನತ್ತ ಹಾರಿದ್ದಾರೆ.
ಬೆಳಗ್ಗೆ 10-30ರಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ಮುಂಬೈಗೆ ಹಾರಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಆರ್ ಅಶೋಕ್ ಕೂಡಾ, ಎಂಟಿಬಿ ನಾಗರಾಜ್ ಜೊತೆಗೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಕ್ಷದ ಮತ್ತೋರ್ವ ಅತೃಪ್ತ ಶಾಸಕ ಮುನಿರತ್ನ ಕೂಡಾ ನಿನ್ನೆ ಮಧ್ಯರಾತ್ರಿಯೇ ಮುಂಬೈ ತಲುಪಿದ್ದಾರೆ. ಸದ್ಯ ದೆಹಲಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಕೂಡಾ ಇಂದು ಮುಂಬೈಗೆ ಪ್ರಯಾಣಿಸಲಿದ್ದು, ಅತೃಪ್ತರ ಗುಂಪು ಸೇರಲಿದ್ದಾರೆ . ಇದರಿಂದಾಗಿ ಅತೃಪ್ತರ ಸಂಖ್ಯೆ 10ರಿಂದ 13ಕ್ಕೆ ಏರಿಕೆಯಾಗಿದ್ದು, ಈ ಗುಂಪಿನಲ್ಲಿ ಹೊಸ ಹುರುಪು ಬಂದಂತಾಗಿದೆ.
Comments
Post a Comment