ಬೆಂಗಳೂರು: ರಮೇಶ್ ಕುಮಾರ್ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಪೀಕರ್ ಸ್ಥಾನವನ್ನು ಆಡಳಿತ ಪಕ್ಷ ಬಿಜೆಪಿಯಿಂದ ಯಾವ ನಾಯಕ ತುಂಬುತ್ತಾರೆ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಈ ಬಗ್ಗೆ ಅಧಿಕೃತ ಘೋಷಣೆಯಷ್ಟೆ ಬಾಕಿ ಇದೆ. ಇವತ್ತು ಸದನದಲ್ಲಿ ಅವಿರೋಧವಾಗಿ ವಿಶ್ವೇಶ್ವರ ಹೆಗೆಡೆ ಕಾಗೇರಿ ಸ್ಪೀಕರ್ ಆಗಿ ಆಯ್ಕೆಯಾಗಲಿದ್ದಾರೆ.
ಸಾಮಾನ್ಯವಾಗಿ ಆಡಳಿತ ಪಕ್ಷದ ಸದಸ್ಯರಲ್ಲೆ ಒಬ್ಬರು ಸ್ಪೀಕರ್ ಆಗಿ ಆಯ್ಕೆಯಾಗುತ್ತಾರೆ. ಬೆಂಬಲವು ಅವರ ಕಡೆಯೇ ಇರುತ್ತದೆ. ಈ ನಿಟ್ಟಿನಲ್ಲಿ ಮೈತ್ರಿ ಸರ್ಕಾರದ ಆಡಳಿತದ ಅವಧಿಯಲ್ಲಿ ರಮೇಶ್ ಕುಮಾರ್ ರವರು ಸ್ಪೀಕರ್ ಸ್ಥಾನವನ್ನು ಅಲಂಕರಿಸಿದ್ದರು. ತದನಂತರದ ರಾಜಕೀಯ ಬೆಳವಣಿಗೆಯ ಬಳಿಕ ಮೈತ್ರಿ ಸರ್ಕಾರ ಉರುಳಿ , ಬಿಎಸ್ವೈ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಈ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು.
Comments
Post a Comment