ಇದೀಗ ಬಂದ ಸುದ್ದಿ: ಸರ್ಕಾರ ರಚನೆಯ ಬಳಿಕ ಬಿಜೆಪಿಯ ನಾಯಕರಿಗೆ ಮತ್ತೊಂದು ಖಡಕ್ ಸಂದೇಶ ರವಾನಿಸಿದ ಅಮಿತ್ ಶಾ.?

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಸೋಮವಾರ ಬಹುಮತ ಸಾಬೀತುಪಡಿಸಲು ಮುಂದಾಗಿದ್ದಾರೆ. ಇಂದು ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ಬಳಿಕ ಯಡಿಯೂರಪ್ಪ ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರಿಗೆ ಧನ್ಯವಾದ ಹೇಳಲಿದ್ದಾರೆ. ಇದೇ ವೇಳೆ ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಕುರಿತು ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಅಮಿತ್ ಶಾ ಸಂಭಾವ್ಯ ಸಚಿವರ ಪಟ್ಟಿಯನ್ನು ತೆಗೆದುಕೊಂಡು ಬನ್ನಿ ನಾವು ಅಂತಿಮಗೊಳಿಸುತ್ತೇವೆ ಎಂದು ರಾಜ್ಯ ಬಿಜೆಪಿ ನಾಯಕರ ನಿಯೋಗಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸಚಿವರಾಗುವವರ ಭವಿಷ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕೈಯಲ್ಲಿ ಇದ್ದು, ಯಾವುದೇ ಲಾಬಿಗೆ ಅವಕಾಶವಿರುವುದಿಲ್ಲ. ಪ್ರಾಮಾಣಿಕರು, ಸಚ್ಚಾರಿತ್ರ್ಯರು, ಅರ್ಹತೆ ಉಳ್ಳವರಿಗೆ ಸಂಪುಟದಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಬಿಜೆಪಿ ನಾಯಕರ ನಿಯೋಗ ತಮ್ಮನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಅಮಿತ್ ಶಾ ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

Comments