ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಕೂಟ ಸರ್ಕಾರ ಪತನಗೊಂಡ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಅವರು ಪ್ರಮಾಣವಚನ ಸ್ವೀಕರಿಸಿದ ಬರೋಬ್ಬರಿ 25 ದಿನಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, 17 ಮಂದಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಇಷ್ಟವಿಲ್ಲದಿದ್ದರೂ ಬಿಜೆಪಿ ಹೈಕಮಾಂಡ್, ಮೂವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ನೇಮಿಸುವಂತೆ ಸೂಚಿಸಿದ್ದು ಹೀಗಾಗಿ, ಎಸ್.ಸಿ. ಸಮುದಾಯದ ಗೋವಿಂದ ಕಾರಜೋಳ, ಒಕ್ಕಲಿಗ ಸಮುದಾಯದ ಅಶ್ವಥ್ ನಾರಾಯಣ ಹಾಗೂ ಲಿಂಗಾಯತ ಸಮುದಾಯಕ್ಕೆ ಸೇರಿದ ಲಕ್ಷ್ಮಣ ಸವದಿ ಉಪ ಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದರು.
ರಾಜ್ಯದಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿರುವ ಬಿಜೆಪಿ ಹೈಕಮಾಂಡ್ ಇದೀಗ ಕುರುಬ ಹಾಗೂ ಎಸ್.ಟಿ.
ಸಮುದಾಯಕ್ಕೆ ಸೇರಿದ ಇಬ್ಬರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ನೇಮಿಸಲು ತೀರ್ಮಾನಿಸಿದೆ ಎನ್ನಲಾಗಿದೆ. ಇದರಿಂದ ರಾಜ್ಯದ ಪ್ರಬಲ ಕೋಮುಗಳಿಗೆ ಮಣೆ ಹಾಕಿದಂತಾಗುತ್ತದೆ ಎಂಬ ಲೆಕ್ಕಾಚಾರದ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕಟ್ಟಿಹಾಕುವ ಇರಾದೆಯೂ ಇದರ ಹಿಂದಿದೆ ಎನ್ನಲಾಗಿದೆ. ಒಂದೊಮ್ಮೆ ಮತ್ತಿಬ್ಬರು ಉಪ ಮುಖ್ಯಮಂತ್ರಿಗಳಾಗಿ ನೇಮಕಗೊಂಡರೆ ಯಡಿಯೂರಪ್ಪ ಸಂಪುಟದಲ್ಲಿ ಒಟ್ಟು ಐದು ಮಂದಿ ಉಪ ಮುಖ್ಯಮಂತ್ರಿಗಳಾದಂತಾಗುತ್ತದೆ.

Comments
Post a Comment