ಈದೀಗ ಬಂದ ಸುದ್ದಿ: ಬಿಜೆಪಿಗೆ ಒಲಿಯಿತು ಮತ್ತೊಂದು ಗುಡ್ ನ್ಯೂಸ್!! ಬಿಜೆಪಿಗೆ ಸೇರ್ಪಡೆಗೊಂಡ ಭಲಿಷ್ಟ ಮಾಜಿ ಮುಖ್ಯಮಂತ್ರಿ!!

ಲಖನೌ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಸೋಮವಾರ ಮತ್ತೆ ಬಿಜೆಪಿಗೆ ಸೇರ್ಪಡೆಗೊಂಡರು.

ರಾಜಸ್ಥಾನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿದ್ದ ಸಿಂಗ್‌, ಅವರ 5 ವರ್ಷಗಳ ಸೇವಾವಧಿ ಇದೇ ಸೆ.3ರಂದು ಮುಕ್ತಾಯಗೊಂಡಿತ್ತು. ಹೀಗಾಗಿ 87 ವರ್ಷದ ಅವರನ್ನು ಉತ್ತರ ಪ್ರದೇಶ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರದೇವ ಸಿಂಗ್‌ ಪಕ್ಷಕ್ಕೆ ಬರಮಾಡಿಕೊಂಡರು.

ರಾಜ್ಯಪಾಲರಾಗಿ ಸಾಂವಿಧಾನಾತ್ಮಕ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಕಾರಣ ಬಾಬರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಸೇರಿದಂತೆ ಇತರ ಕಾನೂನಾತ್ಮಕ ಪ್ರಕ್ರಿಯೆಗಳಿಂದ ಸಿಂಗ್‌ ಅವರಿಗೆ ವಿನಾಯಿತಿ ಸಿಕ್ಕಿತ್ತು. ಆದರೆ, ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರುಳಿ ಮನೋಹರ ಜೋಷಿ ಮತ್ತು ಉಮಾ ಭಾರತಿ ಅವರನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು

Comments