ಇದೀಗ ಬಂದ ಸುದ್ದಿ: ಸಿದ್ದರಾಮಯ್ಯನಿಗೆ 'ಕಾಂಗ್ರೆಸ್ ನಿಂದಲೇ ಬಿಗ್ ಶಾಕ್'!! ಸಿದ್ದುಗೆ ಮುಲ್ಲಾಯಿತು ಡಿಕೆಶಿಯ ವಿಚಾರ!

ಬೆಂಗಳೂರು : ವಿಪಕ್ಷ ನಾಯಕ ಸ್ಥಾನದ ನಿರೀಕ್ಷೆಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡಿದ್ದು, ಮತ್ತೆ ನಿಮಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ ಎನ್ನಲಾಗಿದೆ.

ವಿಪಕ್ಷ ನಾಯಕನ ಸ್ಥಾನಕ್ಕಾಗಿ ಲಾಬಿ ನಡೆಸಿದ್ದ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಖಡಕ್ ಸಂದೇಶವನ್ನು ರವಾನಿಸಿದ್ದು, ಎರಡೆರಡು ಸ್ಥಾನಗಳನ್ನು ಒಬ್ಬರಿಗೆ ನೀಡಲು ಸಾಧ್ಯವಿಲ್ಲ. ಈಗಾಗಲೆ ಶಾಸಕಾಂಗದ ನಾಯಕರಾಗಿದ್ದೀರಿ, ಮತ್ತೆ ನಿಮಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಸಾಧ್ಯವಿಲ್ಲ. ಎರಡು ಸ್ಥಾನಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ನಿಮ್ಮ ನಿರ್ಧಾರ ತಿಳಿಸಿ ಕಾಂಗ್ರೆಸ್ ಹೈಕಮಾಂಡ್ ಹೇಳಿದೆ ಎನ್ನಲಾಗಿದೆ.

ಇನ್ನು ವಿಪಕ್ಷ ನಾಯಕನ ರೇಸ್ ನಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ಹೆಸರು ಕೇಳಿ ಬರುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಕೂಡ ಒಲವು ತೋರಿದೆ ಎನ್ನಲಾಗಿದ್ದು, ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಪರಮೇಶ್ವರ್ ಜೊತೆ ಚರ್ಚೆ ನಡೆಸಿದೆ.

ಜೊತೆಗೆ ಸಿದ್ದು ವಿರೋಧಿ ಬಣವು ಸಹ ಪರಮೇಶ್ವರ್ ಪರ ಬ್ಯಾಟ್ ಬೀಸಿದ್ದಾರೆ ಎನ್ನಲಾಗಿದೆ.

ಹೀಗಾಗಿ ಸಿದ್ದರಾಮಯ್ಯ ಅವರು ಎರಡು ಸ್ಥಾನಗಳಲ್ಲಿ ಒಂದನ್ನು ಒಪ್ಪಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಯಾವುದೆ ಒಂದು ಹುದ್ದೆಯನ್ನು ಒಪ್ಪಿಕೊಂಡರೂ ಸಿದ್ದರಾಮಯ್ಯರಿಗೆ ಹಿನ್ನಡೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ

Comments