ಬೆಳಗಾವಿ: ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ನಲ್ಲಿ ಸ್ಪರ್ಧಿಸಲು ಕಾಯುತ್ತಿರುವ ಅನರ್ಹ ಶಾಸಕರಿಗೆ ಬಿಜೆಪಿಯ ನಾಯಕರು ದೊಡ್ಡ ಶಾಕ್ ನೀಡಿದ್ದಾರೆ.
ಹುಕ್ಕೇರಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಉಮೇಶ್ ಕತ್ತಿ, ಉಪಚುನಾವಣೆಯಲ್ಲಿ ಅನರ್ಹರ ದಾರಿ ಅವರಿಗೆ, ನಮ್ಮ ದಾರಿ ನಮಗೆ ಎಂದು ಹೇಳಿ ಬಳ್ಳಾರಿ ಜಿಲ್ಲೆಯ ಅನರ್ಹ ಶಾಸಕರಿಗೆ ಶಾಕ್ ನೀಡಿದ್ದಾರೆ.
ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಅಶೊಕ್ ಪೂಜಾರಿಯವರಿಗೆ ಬಿಜೆಪಿ ಟಿಕೆಟ್ ನೀಡಲಿದೆ. ಅಥಣಿಯಲ್ಲಿ ಲಕ್ಷ್ಮಣ ಸವದಿ ಮತ್ತು ಕಾಗವಾಡದಲ್ಲಿ ರಾಜು ಕಾಗೆ ಬಿಜೆಪಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಉಮೇಶ್ ಕತ್ತಿ ಹೇಳಿದರು.
ಡಿಸೆಂಬರ್ ಐದರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ, ಅಥಣಿಯಲ್ಲಿ ಮಹೇಶ್ ಕುಮಟಳ್ಳಿ ಮತ್ತು ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಶಾಸಕರಾಗಿದ್ದು ಸದ್ಯ ಅನರ್ಹರಾಗಿದ್ದಾರೆ.

Comments
Post a Comment