ಇದೀಗ ಬಂದ ಸುದ್ದಿ: ರಾಜ್ಯ ಚುನಾವಣಾ ಆಯೋಗದಿಂದ ಅನರ್ಹ ಶಾಸಕರಿಗೆ ಬಿಗ್ ಶಾಕ್!!

ಬೆಂಗಳೂರು: ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತಿಲ್ಲ ಅಂತಾ ರಾಜ್ಯ ಚುನಾವಣೆ ಆಯೋಗ ಸ್ಪಷ್ಟಪಡಿಸಿದೆ.

ಕೇಂದ್ರ ಚುನಾವಣಾ ಆಯೋಗ ಇಂದು ಉಪಚುನಾವಣೆ ದಿನಾಂಕ ಫಿಕ್ಸ್ ಮಾಡಿದೆ. ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥ ಸಂಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾಹಿತಿ ನೀಡಿರುವ ಅವರು, ಈಗಾಗಲೇ ರಾಜ್ಯದಲ್ಲಿ ಶಾಸಕರಾಗಿ ಅನರ್ಹಗೊಂಡವರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

2023ರವರೆಗೆ ಶಾಸಕರನ್ನು‌ ಅನರ್ಹಗೊಳಿಸಿ ಸ್ಪೀಕರ್ ರೂಲಿಂಗ್ ‌ನೀಡಿರುವ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲ. ಒಂದು ವೇಳೆ ಸುಪ್ರೀಂಕೋರ್ಟ್ ಸ್ಪೀಕರ್ ಆದೇಶಕ್ಕೆ ತಡೆಯಾಜ್ಞೆ ‌ನೀಡಿದರೆ ಸ್ಪರ್ಧಿಸಲು ಅವಕಾಶ ಇದೆ ಅಂತಾ ತಿಳಿಸಿದರು.

Comments