ಈದೀಗ ಬಂದ ಸುದ್ದಿ: ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ಸಚಿವ ಸಂಪುಟ ಸಭೆ! ಈ ವಿಶಿಷ್ಟ  ಸಮಸ್ಯೆಗೆ ಪರಿಹಾರ!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ಮಧ್ಯಾಹ್ನ 1ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ.

ವಿಧಾನಸೌಧದಲ್ಲಿ ನಿಗದಿಯಾಗಿರುವ ಸಂಪುಟ ಸಭೆಯಲ್ಲಿ, ನೆರೆ ಪ್ರವಾಹಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ವಿಳಂಬ, ಹೊಸದಾಗಿ ನೇಮಕವಾಗಿರುವ ಜಿಲ್ಲಾ ಉಸ್ತುವಾರಿ, ದಸರಾ ಆಚರಣೆ ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ ವಿವಿಧ ಇಲಾಖೆಗಳ ಯೋಜನೆಗಳ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

Comments