ಬಿಗ್ ನ್ಯೂಸ್: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಪ್ರಭಾವಿ ನಾಯಕ!! ತಲೆಕೆಳಗಾದ ಕಾಂಗ್ರೆಸ್!

ಬಳ್ಳಾರಿಯ ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಲಿದ್ದು, ಅಧಿಕೃತವಾಗಿ ಬಿಜೆಪಿ ಸೇರಲಿರುವ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಬಗ್ಗೆ ಈಗಾಗಲೇ ಸಚಿವ ಶ್ರೀರಾಮುಲು ಜೊತೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಇಂದು ಮಾಜಿ ಸಚಿವ ಯುಟಿ ಖಾದರ್ ಕೂಡ ಮುಖ್ಯಮಂತ್ರಿ ಬಿಎಸ್ವೈ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ.

ಬಳ್ಳಾರಿ (ಸೆ. 27): ಕಾಂಗ್ರೆಸ್-ಜೆಡಿಎಸ್ ಪಕ್ಷದ ಹಲವು ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಿದ ನಂತರ ಎರಡೂ ಪಕ್ಷದಲ್ಲಿ ಭಿನ್ನಮತ ಹೆಚ್ಚಾಗಿದೆ. ಅನರ್ಹ ಶಾಸಕರು ತಮ್ಮ ಪ್ರಕರಣದ ತೀರ್ಪು ಹೊರಬಿದ್ದ ಕೂಡಲೆ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಇನ್ನೊಂದೆಡೆ ಜೆಡಿಎಸ್ ಪಕ್ಷದಲ್ಲಿ ಜಿ.ಟಿ. ದೇವೇಗೌಡ, ಎಸ್.ಆರ್. ಶ್ರೀನಿವಾಸ್ ಸೇರಿದಂತೆ ಕೆಲವು ನಾಯಕರು ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಾಗಿದೆ. ಈ ನಡುವೆ ಕಾಂಗ್ರೆಸ್ನಲ್ಲಿ ಕೂಡ ಭಿನ್ನಮತ ಹೆಚ್ಚಾಗುತ್ತಿದೆ.

ಆಪರೇಷನ್ ಕಮಲ ನಡೆಸಿ ಕಾಂಗ್ರೆಸ್ ಶಾಸಕರನ್ನು ಮುಂಬೈ ಹೋಟೆಲ್ನಲ್ಲಿರಿಸಿರುವ ಬಿಜೆಪಿ ಕೈ ಶಾಸಕರಿಗೆ ಕೋಟಿಗಟ್ಟಲೆ ಹಣ ನೀಡಿದೆ ಎಂದು ಆಕ್ರೋಶ ಹೊರಹಾಕಿದ್ದ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಇದೀಗ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಈ ಮೂಲಕ ಅನಿಲ್ ಲಾಡ್ ಅವರಿಂದಲೇ ಕಾಂಗ್ರೆಸ್ನಲ್ಲಿ ಮತ್ತೊಮ್ಮೆ ರಾಜೀನಾಮೆ ಪರ್ವ ಆರಂಭವಾಗುವ ಸಾಧ್ಯತೆಯಿದೆ. ಈ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಮಂಗಳೂರು ಶಾಸಕ ಯು.ಟಿ. ಖಾದರ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬಳ್ಳಾರಿ ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರಲು ನಿರ್ಧರಿಸಿದ್ದು, ಈ ಬಗ್ಗೆ ತಮ್ಮ ಕಾರ್ಯಕರ್ತರಿಗೆ ಮೆಸೇಜ್ ಕಳಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಗೆ ಸೇರಲು ಯೋಚಿಸಿದ್ದೇನೆ. ನಿಮ್ಮ ಅಭಿಪ್ರಾಯವನ್ನು ತಿಳಿಸಿ ಎಂದು ಅನಿಲ್ ಲಾಡ್ ಕಾರ್ಯಕರ್ತರಿಗೆ ಮೆಸೇಜ್ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿರುವ ಬ್ರೂಸ್ಪೇಟೆ ಬ್ಲಾಕ್ ಕಾಂಗ್ರೆಸ್ ವಾಟ್ಸಾಪ್ ಗ್ರೂಪ್ಗೆ ಅನಿಲ್ ಲಾಡ್ ಮೆಸೇಜ್ ಕಳುಹಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ, ಬಳ್ಳಾರಿಯ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಬಿಜೆಪಿ ಸೇರುವುದು ಖಚಿತ ಎನ್ನಲಾಗುತ್ತಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಅನಿಲ್ ಲಾಡ್ ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ನ್ಯೂಸ್18ಗೆ ಖಚಿತಪಡಿಸಿರುವ ಅನಿಲ್ ಲಾಡ್, ಸೋಮವಾರ ಮುಖ್ಯಮಂತ್ರಿಯನ್ನು ಭೇಟಿ ಮಾಡಲಿದ್ದೇನೆ.  ಈಗಾಗಲೇ ಈ ಬಗ್ಗೆ ಸಚಿವ ಶ್ರೀರಾಮುಲು ಅವರ ಜೊತೆ ಚರ್ಚೆ ನಡೆಸಿದ್ದೇನೆ. ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

ಪಕ್ಷ ತೊರೆಯಲು ಕಾರಣವೇನು?:

ಕಾಂಗ್ರೆಸ್ನಲ್ಲಿರುವ ಹಲವು ಬಣಗಳಿಂದ ಬೇಸರಗೊಂಡು ಪಕ್ಷ ತೊರೆಯುವ ನಿರ್ಧಾರ ಮಾಡಿರುವುದಾಗಿ ತಿಳಿಸಿರುವ ಅನಿಲ್ ಲಾಡ್, ಶಾಸಕ, ಎಂಎಲ್ಸಿ ಪದವಿಯ ಆಸೆಗಾಗಿ ಬಿಜೆಪಿ ಸೇರುತ್ತಿಲ್ಲ. ಬಿಜೆಪಿ ಕಾರ್ಯಕರ್ತನಾಗಿ ಬಿಜೆಪಿ ಸೇರುತ್ತಿದ್ದೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ನಲ್ಲಿ ಮತ್ತೊಮ್ಮೆ ಅಸಮಾಧಾನ ಭುಗಿಲೆದ್ದಂತಾಗಿದೆ.

Comments