ಇದೀಗ ಬಂದ ಸುದ್ದಿ: ಕಾಂಗ್ರೆಸ್ ಗೆ ಶಾಕ್! ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ನಿಂದ ಗುಡ್ ನ್ಯೂಸ್!!

ನವದೆಹಲಿ(ಸೆ. 26) ಹದಿನೈದು ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅನರ್ಹ ಶಾಸಕರ ಅನರ್ಹತೆ ಪ್ರಕರಣದ ವಿಚಾರಣೆ ಸಂಪೂರ್ಣ ಮುಗಿದ ಮೇಲೆ ಚುನಾವಣೆಗೆ ಹೋಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅನರ್ಹ ಶಾಸಕರಿಗೆ ತಾತ್ಕಾಲಿಕ ಗೆಲುವು ಸಿಕ್ಕಿದೆ. ಉಪ ಚುನಾವಣೆಗೆ ತಡೆ ನೀಡಿ 17 ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.  ನಾವು ಪ್ರಕರಣವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಬೆಳಗ್ಗೆಯಿಂದಲೇ ವಾದ-ಪ್ರತಿವಾದಗಳು ನಡೆದವು. ಚುನಾವಣಾ ಆಯೋಗದ ಪರವಾಗಿಯೂ ವಕೀಲರು ಹಾಜರಾಗಿದ್ದರು. ಅಂತಿಮವಾಗಿ ಸುಪ್ರೀಂ ಕೋರ್ಟ್ ಚುನಾವಣೆಗೆ ತಡೆ ನೀಡಿದ್ದು ಸದ್ಯ ರಾಜ್ಯದಲ್ಲಿ ಆರಂಭವಾಗಿದ್ದ ರಾಜಕೀಯ ಬಿಸಿ ತಣ್ಣಗಾಗಲಿದೆ.

Comments