ಈದೀಗ ಬಂದ ಸುದ್ದಿ: ಕೊನೆಗೂ ಅನರ್ಹ ಶಾಸಕರಿಗೆ ಗುಡ್ ನ್ಯೂಸ್ ನೀಡದ ಚುನಾವಣಾ ಆಯೋಗ!! ಬಿಜೆಪಿಯಿಂದ ಉಪಚುಣಾವನೆಗೆ ಇಳಿದರು ಈ ಶಾಸಕರು..
ಬೆಂಗಳೂರು, ಸೆ.24-ಹದಿನೈದು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಗಳಲ್ಲಿ ಅನರ್ಹ ಶಾಸಕರು ಸೇರಿದಂತೆ ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಆದರೆ ಅದು ಅಂಗೀಕಾರಗೊಳ್ಳುವುದು ಅಥವಾ ಬಿಡುವುದು ಸುಪ್ರೀಂಕೋರ್ಟ್‍ನ ತೀರ್ಪಿನ ಮೇಲೆ ಅವಲಂಬಿತವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ನಾನು ಹೇಳೇ ಇಲ್ಲ. ನನ್ನ ಹೇಳಿಕೆಗಳನ್ನು ಕೆಲವರು ತಮಗೆ
ತಿಳಿದಂತೆ ಅರ್ಥೈಸಿ ಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಅನರ್ಹ ಶಾಸಕರ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‍ನ ಮುಂದೆ ನಿನ್ನೆ ಕೇಂದ್ರ ಚುನಾವಣಾ ಆಯೋಗದ ಪ್ರತಿನಿಧಿಗಳು ಸ್ವಯಂಪ್ರೇರಿತರಾಗಿ ಹಾಜರಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಲು ಆಯೋಗದ ಆಕ್ಷೇಪಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಸ್ಪಷ್ಟನೆ ನೀಡಿದ ಸಂಜೀವ್‍ಕುಮಾರ್ ಅವರು, ಸ್ಪೀಕರ್ ಅವರ ತೀರ್ಪಿನ ಅನುಸಾರ ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇಲ್ಲ ಎಂದು ನಾನು ಹೇಳಿಲ್ಲ. ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ಆ ಬಗ್ಗೆ ಮಾತನಾಡಿದರೆ ನ್ಯಾಯಾಂಗ ನಿಂದನೆಯಾಗುತ್ತದೆ. ಅನರ್ಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಚರ್ಚೆ ಮಾಡುವುದಿಲ್ಲ ಎಂದರು.
ಅನರ್ಹಗೊಂಡಿರುವ ಶಾಸಕರು ನಾಮಪತ್ರ ಸಲ್ಲಿಸಲು ಅವಕಾಶವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾಮಪತ್ರ ಸಲ್ಲಿಸುವವರನ್ನು ಯಾರೂ ಅಡ್ಡಿಪಡಿಸಲು ಅವಕಾಶ ಇಲ್ಲ. ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಅದು ಅಂಗೀಕಾರಗೊಳ್ಳಬೇಕೋ, ಬೇಡವೋ ಎಂಬುದನ್ನು ಚುನಾವಣಾಧಿಕಾರಿಗಳು ನಿರ್ಧಾರ ಮಾಡುತ್ತಾರೆ.
ಸದ್ಯಕ್ಕೆ ಪ್ರಕರಣ ವಿಚಾರಣೆ ಹಂತದಲ್ಲಿದೆ. ಶೀಘ್ರವೇ ತೀರ್ಪು ಹೊರಬೀಳಬಹುದು. ಆನಂತರ ಎಲ್ಲದಕ್ಕೂ ಸ್ಪಷ್ಟತೆ ಸಿಗುತ್ತದೆ. ಆವರೆಗೂ ನಾವು ಹೆಚ್ಚು ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದರು. ಸ್ಪೀಕರ್ ಅವರ ತೀರ್ಪು ಜನಪ್ರಾತಿನಿಧ್ಯ ಕಾಯ್ದೆಯನ್ನು ಅನುಸರಿಸಿದೆ. ಹಾಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾಧಿಕಾರಿಗಳು ಎಲ್ಲಾ ಅಂಶಗಳನ್ನು ಗಮನಿಸುತ್ತಾರೆ ಎಂದು ಹೇಳಿದರು.

Comments
Post a Comment