ಬೆಂಗಳೂರು : ನೆರೆ-ಬರ ಪರಿಹಾರ, ಅಭಿವೃದ್ಧಿ ಕಾರ್ಯಗಳಿಗಾಗಿ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 10 ಜಿಲ್ಲೆಗಳ ಬಿಜೆಪಿ ಶಾಸಕರ ಜೊತೆ ನೆರೆ-ಬರ ಅಭಿವೃದ್ಧಿ ಕಾರ್ಯಗಳ ಕುರಿತು ಇಡೀ ದಿನ ಸಮಾಲೋಚನೆ ನಡೆಸಿ ಈ ಆಶ್ವಾಸನೆ ನೀಡಿದ್ದಾರೆ. ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮೂಲಕ ಕಾಮಗಾರಿಗಳನ್ನು ಕೈಗೆತ್ತಿಕೊಂಡು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ಮರುನಿರ್ಮಾಣ ನಮ್ಮ ಮಹತ್ವದ ಹೆಜ್ಜೆ, ಜೊತೆಗೆ ಹಾನಿಗೊಳಗಾದ ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ನೀರಾವರಿ ಯೋಜನೆಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುವುದು. ಮುಂದಿನ ವಾರ ಉಳಿದ ಜಿಲ್ಲೆಗಳ ಶಾಸಕರ ಜೊತೆ ಸಭೆ ನಡೆಸುತ್ತೇನೆ. ಶಾಸಕರ ಜೊತೆ ಸಭೆ ನಡೆಸುವುದರಿಂದ ಉತ್ತಮ ಅಭಿಪ್ರಾಯ ಸಂಗ್ರಹವಾಗುತ್ತದೆ ಎಂದು ಹೇಳಿದರು.

Comments
Post a Comment