'ಯಡಿಯೂರಪ್ಪನವರ ವಿರುದ್ದದ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ'!! ಪ್ರತಿಭಟನೆಗೆ ತಿರುಗೆಟು ನೀಡಿದ BSY..

ಬೆಂಗಳೂರು, ಸೆಪ್ಟೆಂಬರ್ 18: ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ ರಾಜ್ಯ ಕಾಂಗ್ರೆಸ್ ಮುಖಂಡರು 'ಯಡಿಯೂರಪ್ಪ ಎಲ್ಲಿದ್ದೀಯಪ್ಪಾ' ಎಂದು ಘೋಷಣೆಗಳನ್ನು ಕೂಗಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು, ಯಡಿಯೂರಪ್ಪ, ಅಮಿತ್ ಶಾ, ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡಿ ಇಲ್ಲವೇ ರಾಜೀನಾಮೆ ನೀಡಿ ಎಂದು ಒತ್ತಾಯಿಸಿದರು.

ಹೈಕಮಾಂಡ್ ಅಂಗಣದಲ್ಲಿ ಸಿದ್ದರಾಮಯ್ಯಗೆ ಸಿಗುತ್ತಿದ್ದ 'ರಾಜ ಮರ್ಯಾದೆ' ಕಮ್ಮಿ ಆಯಿತೇ?

ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಸೇರಿದಂತೆ ರಾಜ್ಯದ 22 ಜಿಲ್ಲೆಗಳು ಭೀಕರ ಪ್ರವಾಹಕ್ಕೆ ಸಿಲುಕಿ ತತ್ತರಿಸಿವೆ.
ರಾಜ್ಯ ಮತ್ತು ಕೇಂದ್ರ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ತಾತ್ಕಾಲಿಕ್ ಶೆಡ್ ವ್ಯವಸ್ಥೆ ಇಲ್ಲ, ವಾರದೊಳಗೆ ಗಂಜಿ ಕೇಂದ್ರಗಳು ಮುಚ್ಚಿದವು, ಶಾಲೆಗಳು ನಡೆಯುತ್ತಿಲ್ಲ' ಎಂದು ಆರೋಪಿಸಿದರು.

ನೆಪ ಮಾತ್ರಕ್ಕೆ ಪರಿಹಾರ ನೀಡಲಾಗಿದೆ: ಸಿದ್ದರಾಮಯ್ಯ
ಸಂತ್ರಸ್ತರು ರಸ್ತೆಯಲ್ಲಿ ಬಸ್ ನಿಲ್ದಾಣದಲ್ಲಿ ಜೀವಿಸುತ್ತಿದ್ದಾರೆ: ಸಿದ್ದರಾಮಯ್ಯ

'ಈಗಲೂ ಸಂತ್ರಸ್ತರು ಬಸ್ ಸ್ಟ್ಯಾಂಡ್‌ಗಳು, ರಸ್ತೆಯಲ್ಲಿ ಜೀವನ ಸಾಗಿಸಬೇಕಾದ ಪರಿಸ್ಥಿತಿಯಿದೆ. ಗ್ರಾಮಗಳ ಸ್ಥಳಾಂತರ, ಪುನರ್ವಸತಿ ಒದಗಿಸುವ ಕಾರ್ಯ ಇನ್ನೂ ಆರಂಭಗೊಂಡಿಲ್ಲ. ನೆಪಮಾತ್ರಕ್ಕೆ ಪರಿಹಾರ ನೀಡಲಾಗಿದೆಯೇ ಹೊರತು ಅದರಿಂದ ಜನರಿಗೆ ಪ್ರಯೋಜನವಾಗುತ್ತಿಲ್ಲ. ಕೇಂದ್ರ ಸರ್ಕಾರವಂತೂ ಪ್ರವಾಹಕ್ಕೂ ತಮಗೂ ಸಂಬಂಧವೇ ಇಲ್ಲವೆಂಬಂತೆ ಇದೆ' ಎಂದು ಸಿದ್ದರಾಮಯ್ಯ ಹೇಳಿದರು.


ಪರಿಹಾರ ಕಾರ್ಯಾಚರಣೆ ಕೈಗೊಂಡಿಲ್ಲ: ಸಿದ್ದರಾಮಯ್ಯ
7 ಕ್ಕೂ ಹೆಚ್ಚು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ: ಸಿದ್ದರಾಮಯ್ಯ

'ಇನ್ನು ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಬಿತ್ತನೆಗೆ ನೀರಿನ ಸೌಲಭ್ಯವಿಲ್ಲದೆ ಜನ ಕಂಗಾಲಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ಜಿಲ್ಲೆಗಳನ್ನು ಇನ್ನೂ ಸಹ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿ, ಪರಿಹಾರ ಕಾರ್ಯಾಚರಣೆ ಕೈಗೊಂಡಿಲ್ಲ. ಸರ್ಕಾರ ಇನ್ನೂ ನಿದ್ರಾವಸ್ಥೆಯಲ್ಲಿದೆ' ಎಂದು ಸಿದ್ದರಾಮಯ್ಯ ದೂರಿದರು.

ಹಾಲಿ-ಮಾಜಿ ಶಾಸಕರು-ಸಚಿವರು ಭಾಗಿ
ಕಾಂಗ್ರೆಸ್‌ನಿಂದ ಸೆ.24ರಂದು ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ

'ರಾಜ್ಯ ಮತ್ತು ಕೇಂದ್ರ ಸರ್ಕಾರದ ಈ ತಾತ್ಸಾರ ಧೋರಣೆಯ ವಿರುದ್ಧ ಈ ತಿಂಗಳ 24ನೇ ತಾರೀಖಿನಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಇದರಲ್ಲಿ ರಾಜ್ಯದ ಹಾಲಿ ಹಾಗೂ ಮಾಜಿ ಶಾಸಕರು, ಸಂಸದರು ಮತ್ತು ಪಕ್ಷದ ಮುಖಂಡರು ಭಾಗವಹಿಸುವರು' ಎಂದು ಸಿದ್ದರಾಮಯ್ಯ ಘೋಷಿಸಿದರು.

ಹಲವು ಶಾಸಕರು, ಮಾಜಿ ಸಚಿವರುಗಳು ಭಾಗಿ
ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿ

ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಗೃಹ ಮಂತ್ರಿ ಎಂಬಿ ಪಾಟೀಲ್, ಎಚ್‌ಕೆ ಪಾಟೀಲ್, ಉಗ್ರಪ್ಪ, ಕೆಸಿ ಜಾರ್ಜ್, ರಮೇಶ್ ಕುಮಾರ್, ಕೃಷ್ಣಬೈರೇಗೌಡ ಇನ್ನೂ ಹಲವು ಪ್ರಮುಖ ಶಾಸಕರು ಮುಖಂಡರು ಭಾಗವಹಿಸಿದ್ದರು.

Comments