ಬಿಗ್ ನ್ಯೂಸ್:ಡಿ.ಕೆ.ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ!! ಮತ್ತೊಂದು ಸಿಕ್ರೀಟ್ ಬಿಚ್ಚಿಟ್ಟ ED ಅಧಿಕಾರಿಗಳು?  ಮತ್ತೆ 4 ದಿನ ED ಕಸ್ಟಡಿಗೆ!

ನವದೆಹಲಿ : ಇಡಿ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುಗಾಗಿದ್ದು, ಪ್ರಕರಣದ ಮತ್ತಷ್ಟು ವಿಚಾರಣೆಗಾಗಿ ಡಿಕೆಶಿ ಅವರನ್ನು ಮತ್ತೆ ನಾಲ್ಕು ದಿನ ಕಸ್ಟಡಿಗೆ ಕೇಳಲು ಇಡಿ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಅಕ್ರಮ ಹಣ ವರ್ಗಾವಣೆ, ಹವಾಲಾ ಪ್ರಕರಣಗಳ್ಲಿ ಕಳೆದೊಂದು ವಾರದಿಂದ ಇಡಿ ಹಿಡಿತದಲ್ಲಿರುವ ಡಿಕೆಶಿ, ಇಂದು ಏಳನೇ ದಿನದ ವಿಚಾರಣೆ ಎದುರಿಸಲಿದ್ದಾರೆ. ಸೆಪ್ಟೆಂಬರ್ 4 ರಿಂದ 13 ರ ವರೆಗೂ ಅಂದರೆ ಒಟ್ಟು 10 ದಿನಗಳ ಕಾಲ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಕಸ್ಟಡಿಗೆ ನೀಡಿ ವಿಶೇಷ ಕೋರ್ಟ್ ಆದೇಶಿಸಿತ್ತು. ಆದೇಶದಂತೆ ಇನ್ನೂ ಮೂರು ದಿನಗಳಲ್ಲಿ ಕಸ್ಟಡಿ ಅಂತ್ಯವಾಗಲಿದೆ. ಆದರೆ ಜಾಮೀನು ಪಡೆದು ಹೊರಬರಬೇಕು ಅಂದುಕೊಂಡಿದ್ದ ಡಿ.ಕೆ.ಶಿವಕುಮಾರ್ ಗೆ ಹೊಸ ಸಂಕಷ್ಟ ಎದುರಾಗಿದೆ.

ಡಿಕೆಶಿ ವಿಚಾರಣೆಗೆ ಸ್ಪಂದಿಸುತ್ತಿಲ್ಲ. ಯಾವುದೇ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸುತ್ತಿಲ್ಲ. ಏನೇ ಕೇಳಿದರೂ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ. ಪ್ರಕರಣ ವಿಸ್ತಾರವಾಗಿದ್ದು, ಮತ್ತಷ್ಟು ವಿಚಾರಣೆಯ ಅವಶ್ಯಕತೆ ಇದೆ. ಹೀಗಾಗಿ ಇನ್ನೂ ನಾಲ್ಕು ದಿನ ಕಸ್ಟಡಿಗೆ ವಿಸ್ತರಣೆ ಮಾಡುವಂತೆ ಇಡಿ ಅಧಿಕಾರಿಗಲು ಕೋರ್ಟಿಗೆ ಮನವಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Comments