'ಉಪಚುನಾವಣೆಯ ಗೆಲುವಿಗೆ' ಬಿಸ್ ವೈ ನಿರ್ಮಿಸಿದ ಮಾಸ್ಟರ್ ಪ್ಲಾನ್ನನ್ನು ಕಂಡು ಬೆಚ್ಚಿ ಬಿದ್ದ ಅಮಿತ್ ಶಾ! 15 ಕ್ಷೇತ್ರಗಳಲ್ಲಿ ಗೆಲುವು ಗ್ಯರಂಟೀ!

ರಾಜ್ಯ ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಭರ್ಜರಿ ತಂತ್ರ ರೂಪಿಸಿದೆ. 15 ಕ್ಷೇತ್ರಗಳ ಉಪಚುನಾವಣೆ ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಮಹತ್ವದ್ದಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲಲು ಕಮಲ ಪಾಳಯ ಪ್ಲಾನ್ ಮಾಡಿದೆ. 15 ಕ್ಷೇತ್ರಕ್ಕೆ ಒಬ್ಬ ಸಚಿವರನ್ನು ಉಸ್ತುವಾರಿಯಾಗಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಬೆಳಗಾವಿಯಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸುಪ್ರೀಂ ಕೋರ್ಟ್ ತೀರ್ಪಿನ ನಂತರವೇ ನಡೆಯಲಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ತೀರ್ಪು ಏನಾಗಲಿದೆ ಎಂಬುದರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷ ನಿರ್ಧರಿಸಿದೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿಯೇ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ರೈತರ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಹಿಂದಿನ ಸರ್ಕಾರ ಮಾಡಿದ್ದೇ ದೊಡ್ಡ ಭಾರವಾಗಿದೆ. ಅದನ್ನು ಜಾರಿಗೊಳಿಸಲು ಏನು ಬೇಕೋ ಎಲ್ಲವನ್ನೂ ಮಾಡುತ್ತೇನೆ ಎಂದು ಹೇಳಿರುವ ಯಡಿಯೂರಪ್ಪ, ಹಳೇ ಸಾಲ ಮನ್ನಾಗೆ ಬೇಕಾದ ಬಾಕಿ ಹಣ ಕೊಡುತ್ತೇವೆ. ಆದರೆ, ಹೊಸದಾಗಿ ಸಾಲ ಮನ್ನಾ ಮಾಡುವಷ್ಟು ಆರ್ಥಿಕ ಪರಿಸ್ಥಿತಿ ಸರಿ ಇಲ್ಲ ಎಂದು ಅವಲತ್ತುಕೊಂಡಿದ್ಧಾರೆ.

ಆಗಸ್ಟ್‌ನಲ್ಲಿ ಸುರಿದ ಭಾರೀ ಮಳೆ ಹಾಗೂ ಉತ್ತರ ಕರ್ನಾಟಕದ ನೆರೆಯಿಂದ ಭಾರೀ ಪ್ರಮಾಣದಲ್ಲಿ ಹಾನಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ಎಲ್ಲಾ ಹಣವನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದೇವೆ ಎಂದರು. ಮನೆ ಹಾನಿಯನ್ನು ಎ, ಬಿ ಎಂದು ವಿಂಗಡಣೆ ಮಾಡಿದ್ದೇವೆ. ಈ ಸಂಬಂಧ ಸರ್ಕಾರದ ಆದೇಶ ಕೂಡಾ ಹೊ‌ರಬೀಳಲಿದ್ದು, ಗ್ರಾಮಗಳ ಸಂಪೂರ್ಣ ಸ್ಥಳಾಂತರಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ಧಾರೆ.

Comments