ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ಗೆಲುವು ನಿಶ್ಚಿತ- ಎಂದ ಖರ್ಗೆ

ಮುಂಬೈ: ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಭರ್ಜರಿ ಪ್ರಚಾರ ನಡೆಸಿರುವ ಕಾಂಗ್ರೆಸ್, ಈ ಬಾರಿ ಚುನಾವಣೆಯಲ್ಲಿ ಗೆಲುವು ನಿಶ್ಚಿತ ಎಂದಿದೆ.

ಚುನಾವಣಾ ಬಹಿರಂಗ ಪ್ರಚಾರ ಇಂದು ಅಂತ್ಯವಾಗಲಿದ್ದು, ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಮಲ್ಲಿಕಾರ್ಜುನ್ ಖರ್ಗೆ
ನಾನು ಸಾಧ್ಯವಾದಷ್ಟೂ ಪ್ರಮುಖ ಸ್ಥಳದಲ್ಲಿ ಪ್ರಚಾರ ಮಾಡಿದ್ದೇನೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಲ್ಲಿನ ಜನರು ರೊಚ್ಚಿಗೆದ್ದಿದ್ದಾರೆ. ಮುಂಬೈ ಹಾಗೂ ಮಹಾರಾಷ್ಟ್ರದಲ್ಲಿ 2200 ಉದ್ಯಮಗಳು ಮುಚ್ಚಿ ಹೋಗಿವೆ. ಎನ್ಸಿಪಿ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸುತ್ತಿದ್ದೇವೆ. ಈ ಬಾರಿ ನಮ್ಮ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದರು.

ಮಹದಾಯಿ ವಿಚಾರ ನಾವು ಹಿಂದೆ ಅಧಿಕಾರದಲ್ಲಿದ್ದಾಗಲೂ ಚರ್ಚೆ ಮಾಡಿದ್ದೇವೆ. ಗೋವಾಗೆ ಬಹಳಷ್ಟು ನೀರು ಹರಿದುಹೋಗುತ್ತದೆ. 8 ಟಿಎಂಸಿ ನೀರು ಕೇಳಿದ್ದೇವೆ. ಗೋವಾದವರು ಗಮನ ಹರಿಸುತ್ತಿಲ್ಲ. ಮಹದಾಯಿ ಇಡೀ ರಾಜ್ಯದ ಸಮಸ್ಯೆ. ಎಲ್ಲರೂ ಪಕ್ಷಾತೀತವಾಗಿ ಸೇರಿ ಇದನ್ನು ಬಗೆಹರಿಸಬೇಕು ಎಂದರು.

Comments