ಅತೀ ಶೀಘ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ! ಶೀಘ್ರದಲ್ಲಿ ಬಿಜೆಪಿ ಸರ್ಕಾರ ಪತನ!!

ಇನ್ನು ಕೆಲವೇ ತಿಂಗಳುಗಳು ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸುವ ಸಲುವಾಗಿ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಸರ್ಕಾರ ಇನ್ನು ಕೆಲವೇ ತಿಂಗಳು ಮಾತ್ರ ಅಧಿಕಾರದಲ್ಲಿರಲಿದ್ದು, ಜನರು ಯಡಿಯೂರಪ್ಪ ಹಾಗೂ ಅವರ ಸರ್ಕಾರದ ಮೇಲೆ ಭರವಸೆಗಳನ್ನು ಇಟ್ಟುಕೊಳ್ಳಬಾರದು ಎಂದು ಹೇಳಿದ್ದಾರೆ.

ಹೇಳಿಕೊಳ್ಳುವಂತಹ ಕೆಲಸಗಳನ್ನು ಬಿಜೆಪಿ ಮಾಡುತ್ತಿಲ್ಲ. ಸ್ಥಳೀಯ ಜನರು ಯಡಿಯೂರಪ್ಪ ಅವರ ಮೇಲೆ ಭರವಸೆಗಳನ್ನು ಇಟ್ಟುಕೊಳ್ಳಬಾರದು. ಆಡಳಿತಾರೂಢ ಸರ್ಕಾರ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಉರುಳಲಿದೆ. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಜನರ ಸಂಕಷ್ಟವನ್ನು ಪರಿಹರಿಸಲಿದೆ ಎಂದು ತಿಳಿಸಿದ್ದಾರೆ.

ಪ್ರವಾಹ ಪೀಡಿತ ಗ್ರಾಮಗಳ ವಾಸ್ತವಿಕ ಪರಿಸ್ಥಿತಿಯನ್ನು ಯಡಿಯೂರಪ್ಪ ಅವರಿಗೆ ತಿಳಿಸಲು ನನ್ನಿಂದ ಸಾಧ್ಯವಾದಷ್ಟು ಪ್ರಯತ್ನವನ್ನು ನಾವು ಮಾಡಿದ್ದೇವೆ. ನನ್ನಿಂದ ಸಾಧ್ಯವಾದ ಕೆಲಸಗಳನ್ನೂ ನಾನು ಮಾಡಿದ್ದೇನೆ. ನೆರೆ ಪರಿಹಾರ ಕುರಿತು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

Comments