ಮಹಾ ಚುನಾವಣೆಗೆ ಹೆದರಿ ಓಡಿದ ಹೋದ ರಾಹುಲ್!! ಕಾಂಗ್ರೆಸ್ ಗೆಲ್ಲುವು ಅಸಾಧ್ಯ ಎಂದ ರಾಹುಲ್!

ಸದ್ಯದಲ್ಲಿಯೇ ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಪ್ರಚಾರ ಕಾರ್ಯದಲ್ಲಿ ಮುಂಚೂಣಿಯಲ್ಲಿ ಇರಬೇಕಾದ ರಾಹುಲ್ ಗಾಂಧಿ ಶನಿವಾರ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದಾರೆ. ಇದು ಪಕ್ಷದ ನಾಯಕರಿಗೆ ಆಘಾತವನ್ನುಂಟು ಮಾಡಿದೆ ಎನ್ನಲಾಗಿದೆ.

ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಈ ಸಮಯದಲ್ಲಿ ರಾಹುಲ್ ಪ್ರವಾಸ ಕೈಗೊಂಡಿರುವುದು ಕಾಂಗ್ರೆಸ್ಸಿಗರ ಕಳವಳಕ್ಕೆ ಕಾರಣವಾಗಿದೆ.

ಹರಿಯಾಣ ಕಾಂಗ್ರೆಸ್ಸಿನಲ್ಲಿ ಭಿನ್ನಮತ ಮುಗಿಲು ಮುಟ್ಟಿದ್ದು, ಹರಿಯಾಣ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಅಶೋಕ್ ತನ್ವಾರ್ ಅವರು ಪಾರ್ಟಿಯ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು‌, ತಾವು ಸಾಮಾನ್ಯ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದ್ದಾರೆ. ತನ್ವಾರ್, ರಾಹುಲ್ ಗಾಂಧಿಯವರ ಅತ್ಯಂತ ನಿಕಟವರ್ತಿಯಾಗಿದ್ದು, ತಮ್ಮನ್ನು ಕಾಂಗ್ರೆಸ್ಸಿನಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Comments