ಮಹಾ ಸಮೀಕ್ಷೆ: ರಾಜಕೀಯದಲ್ಲಿ ಅಲ್ಲೋಳ ಕಲ್ಲೋಳ!! ಈ ಚುನಾವಣೆಯಲ್ಲಿ ಯಾರಿಗೆ ಜಯ ಗೊತ್ತಾ!!

ಬೆಂಗಳೂರು, ಅಕ್ಟೋಬರ್ 18 : ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದೆ.

ಮಹಾರಾಷ್ಟ್ರದ 288 ಮತ್ತು ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಪ್ರಚಾರ ಬಿರುಸುಗೊಂಡಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, 25ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಜನ್ ಕೀ ಬಾತ್ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ವಿಧಾನಸಭೆ ಚುನಾವಣೆಗಳಲ್ಲೂ ಗೆಲುವಿನ ಓಟ ಮುಂದುವರೆಸಲಿದೆ.

ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಪ್ರಸ್ತುತ ಬಿಜೆಪಿಯೇ ಅಧಿಕಾರ ನಡೆಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿಯೂ ಪಕ್ಷ ಗೆದ್ದು ಪುನಃ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆ ಹೇಳಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ.

Comments