ಕಾಂಗ್ರೆಸ್ ಪಕ್ಷದಲ್ಲಿ ಮೂಲನಿವಾಸಿಗಳು-ವಲಸಿಗರ ನಡುವಿನ ಸಮರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ. ಈ ಮೂಲಕ ವಿಧಾನಸಭೆ ವಿರೋಧಪಕ್ಷದ ನಾಯಕ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸಿದ್ದರಾಮಯ್ಯ ಕಾಂಗ್ರೆಸ್ ಸೇರಿದ ನಂತರ ನಿರಂತರವಾಗಿ ಅಧಿಕಾರ ಚುಕ್ಕಾಣಿ ಹಿಡಿದಂತಾಗಿದೆ. ಅವರು ಪಕ್ಷಕ್ಕೆ ಬಂದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಕೇಂದ್ರಕ್ಕೆ ಕಳುಹಿಸಲಾಗಿತ್ತು. ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ನಂತರ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದರು.
ಇತ್ತೀಚಿನವರೆಗೂ ಆಡಳಿತದಲ್ಲಿದ್ದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಇದ್ದರು.
ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ಕಾಂಗ್ರೆಸ್ ನಲ್ಲಿ ವಿರೋಧ ಪಕ್ಷದ ನಾಯಕರಾಗಲು ತೀವ್ರ ಪೈಪೋಟಿ ಏರ್ಪಟ್ಟಿತ್ತು. ಮೂಲನಿವಾಸಿಗಳು ಮತ್ತು ವಲಸಿಗರ ನಡುವೆ ಶೀತಲ ಸಮರವೇ ನಡೆದಿತ್ತು. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಹೆಚ್. ಮುನಿಯಪ್ಪ ಅವರು ಸಿದ್ದರಾಮಯ್ಯನವರಿಗೆ ವಿಪಕ್ಷ ನಾಯಕನ ಸ್ಥಾನ ನೀಡದಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ.
ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್ ವಿರೋಧ ಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಈ ನಿಟ್ಟಿನಲ್ಲಿ ಲಾಬಿ ಕೂಡಾ ನಡೆಸಿದ್ದರು. ಆದರೆ ಹೆಚ್ಚಿನ ಶಾಸಕರು ಸಿದ್ದರಾಮಯ್ಯ ಅವರನ್ನೇ ಬೆಂಬಲಿಸಿದ್ದರಿಂದ ಅವರಿಗೆ ಹಿನ್ನಡೆಯಾಗಿದೆ ಎನ್ನಲಾಗಿದೆ.
ಈಗ ಶಾಸಕಾಂಗ ಪಕ್ಷದ ನಾಯಕರಿಗೇ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಬೇಕೆಂದು ಸಿದ್ಧರಾಮಯ್ಯ ಅವರು ನೀಡಿದ್ದ ಸಲಹೆಯನ್ನು ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಿದೆ. ವಿಧಾನಸಭೆ ವಿರೋಧಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ಮತ್ತೊಮ್ಮೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದಂತಾಗಿದೆ.
ಮುಂದಿನ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ಸಿದ್ಧರಾಮಯ್ಯ ಅವರನ್ನು ವಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಹಿರಿಯ ನಾಯಕರಿಗೆ ತೀವ್ರ ಮುಖಭಂಗವಾದಂತಾಗಿದೆ.

Comments
Post a Comment