ಅನರ್ಹ ಶಾಸಕನ ಮೊದಲ ಏಟಿಗೆ ಡಿಕೆಶಿ ತತ್ತರ!! ಡಿಕೆಶಿಯ ನಾಡಿನಲ್ಲಿ ಬಿಜೆಪಿ ಪತಾಕೆ ಹಾರಿಸಿದ ನಾಯಕ!!

ಚಿಕ್ಕಬಳ್ಳಾಪುರ : ಅನರ್ಹ ಶಾಸಕ ಕೆ ಸುಧಾಕರ್ ಹಾಗೂ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಮೆಡಿಕಲ್ ಕಾಲೇಜು ವಿಚಾರ ವಿವಾದ ಸೃಷ್ಟಿಸಿತ್ತು. ಮಾಜಿ ಸಚಿವ ಡಿ ಕೆ ಶಿವಕುಮಾರ್ ರವರು ಕನಕಪುರ ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವಂತೆ ಪಟ್ಟು ಹಿಡಿದಿದ್ದರು. ಇದಕ್ಕೆ ಅನರ್ಹ ಶಾಸಕರಾದ ಕೆ ಸುಧಾಕರ್ ಅವರು ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಅನುಮತಿ ನೀಡಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನಾಳೆ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಕಾಲೇಜಿನ ಕಟ್ಟಡದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಲಿದ್ದು, 610 ಕೋಟಿ ರೂಪಾಯಿ ವೆಚ್ಚದ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಸೇರಿದಂತೆ ಒಟ್ಟು 59 ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ರವರು ಇಂದು ತಿಳಿಸಿದ್ದಾರೆ.

Comments