ರೈತರ ವಿರುದ್ಧ ದೂರು ದಾಖಲಿಸಬೇಡಿ. ಅರಣ್ಯಭೂಮಿ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಂದಾಯ, ಅರಣ್ಯ ಮತ್ತು ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸೇಶ್ವರ ಇಮಾಮ್ ಭೂಮಿ ಸಾರಗೋಡು ತತ್ಕೊಳ ಮತ್ತು ಮಸಗಲಿ ಮೀಸಲು ಅರಣ್ಯ ಒತ್ತುವರಿ ತೆರವು ಕುರಿತು ಅಮಾಹಿತಿ ಪಡೆದ ಸಿಎಂ, ಅರಣ್ಯಭೂಮಿ ಉಳಿಯಲು ರೈತರೇ ಕಾರಣ. ರೈತರನ್ನು ಅರಣ್ಯ ಭೂಮಿಯಿಂದ ಒಕ್ಕಲೆಬ್ಬಿಸಬಾರದು. ಕೃಷಿ ಚಟುವಟಿಕೆಗಳಿಗೆ ತೊಂದರೆ ಕೊಡಬಾರದು ಎಂದು ತಿಳಿಸಿದ್ದಾರೆ.
ಸಂಸದೆ ಶೋಭಾ ಕರಂದ್ಲಾಜೆ, ಕೇರಳ ಮಾದರಿಯಲ್ಲಿ ಅಫಿಡವಿಟ್ ಹಾಕಿ ರೈತರ ಜಮೀನು ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಅರಣ್ಯ ಅಧಿಕಾರಿಗಳು ರೈತರ ಜಮೀನನ್ನು ಅರಣ್ಯ ಭೂಮಿ ಎಂದು ತೆರವು ಗೊಳಿಸುತ್ತಿರುವ ಬಗ್ಗೆ ಶೋಭಾ ಕರಂದ್ಲಾಜೆ ದೂರಿದ್ದು ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ರೈತರನ್ನು ಒಕ್ಕಲೆಬ್ಬಿಸಬಾರದು ಅವರ ಕೃಷಿ ಚಟುವಟಿಕೆಗಳಿಗೆ ತೊಂದರೆ ಕೊಡಬಾರದು ಎಂದು ಸೂಚಿಸಿದ್ದಾರೆ.
Comments
Post a Comment