ಇದೀಗ ಬಂದ ಸುದ್ದಿ: ಚೀನಾಗೆ ಮೋದಿ ವಾರ್ನಿಂಗ್ ! ತಂಟೆಗೆ ಬಂದ್ರೆ ತಿರುಗೇಟು ಖಚಿತ

ನವದೆಹಲಿ: ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ, ನಮ್ಮನ್ನು ಕೆಣಕಿದರೆ ಸುಮ್ಮನೆ ಇರುವುದಿಲ್ಲ ಎಂದು ಪ್ರಧಾನಿ ಮೋದಿ ಚೀನಾಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಮಗೆ ಶಾಂತಿ ಬೇಕು. ತಂಟೆಗೆ ಬಂದರೆ ತಕ್ಕ ಉತ್ತರ ಕೊಡುತ್ತೇವೆ ಎಂದು ಹೇಳಿರುವ ಮೋದಿ, ದೇಶದ ಸಮಗ್ರತೆ ಮತ್ತು ಸಾರ್ವಭೌಮತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲವೆಂದು ತಿಳಿಸಿದ್ದಾರೆ.

ಗಡಿಯಲ್ಲಿ ನಮ್ಮ ಯೋಧರು ಮಾಡಿದ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ ಎಂದು ದೇಶದ ಜನರಿಗೆ ಭರವಸೆ ನೀಡುತ್ತೇನೆ. ಈ ವಿಷಯದಲ್ಲಿ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡವೆಂದು ತಿಳಿಸಿದ್ದಾರೆ.

Comments