ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆಗೈದರೆ, ಇತರ ಉಗ್ರರು ಎರಡೂ ಸ್ಥಳಗಳಲ್ಲಿ ಹತ್ತಿರದ ಮಸೀದಿಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಮಸೀದಿಯೊಳಗೆ ಅಡಗಿರುವ ಉಗ್ರರನ್ನು ಸೆರೆ ಹಿಡಿಯಲು ಭದ್ರತಾ ಪಡೆಗಳು ಪ್ರಯತ್ನಿಸುತ್ತಿರುವುದರಿಂದ ಶೋಪಿಯಾನ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಎನ್‌ಕೌಂಟರ್‌ಗಳು ಮುಂದುವರೆದಿದೆ. ಇದೀಗ ಸೇನೆ ಮಸೀದಿ ಒಳಗೆ ಪ್ರವೇಶಿಸಿರುವುದಾಗಿ ತಿಳಿದು ಬಂದಿದೆ.
ಪುಲ್ವಾಮಾದಲ್ಲಿ, ಪ್ಯಾಂಪೋರ್ ಪ್ರದೇಶದ ಮೀಜ್ ನಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯಿತು.
ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಸೇನೆ ಹುಡುಕಾಟ ನಡೆಸುತ್ತಿದ್ದಾಗ ಉಗ್ರರು ಗುಂಡು ಹಾರಿಸಿದೆ , ಸೇನೆ ಇದಕ್ಕೆ ಪ್ರತಿ ದಾಳಿ ನಡೆಸಿದೆ. ಇಲ್ಲಿಯವರೆಗೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆ ಅಧಿಕಾರಿ ತಿಳಿಸಿದ್ದಾರೆ.
ಇನ್ನು ಶೋಪಿಯಾನ್‌ನಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಅರೆಸೈನಿಕ ಪಡೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹತ್ಯೆ ಮಾಡಿದೆ. ಇತರರು ಮಸೀದಿಯಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ
Comments
Post a Comment