'ಯಡಿಯೂರಪ್ಪನವರೇ ಲೆಕ್ಕ ಕೊಡಿ, ರಾಜ್ಯದ ಜನರಿಗೆ ಇದರ ಮಾಹಿತಿ ಗೊತ್ತಾಗ್ಬೇಕು' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.




ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ
ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್, ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು?

ಈ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಆತಂಕ ಅಸುರಕ್ಷತೆ, ಅಭದ್ರತೆಯಲ್ಲಿರುವ ಜನರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.



Comments