ಇದೀಗ ಬಂದ ಸುದ್ದಿ: ಬೆಳಗಿನ ಜಾವ ಭಾರತೀಯ ಸೇನೆಯಿಂದ ಭರ್ಜರಿ ಬೇಟೆ! ಭಾರತೀಯ ಸೈನಿಕರಿಗೆ ನಮ್ಮದೊಂದು ಸಲಾಂ



ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆಗೈದಿದೆ.

ಅನಂತನಾಗ್ ಜಿಲ್ಲೆಯ ಖಲ್ಟೋಹಾರ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿಗಿದ್ದ ಮೃತಪಟ್ಟ ಉಗ್ರರ ಗುರುತು ಪತ್ತೆ ಹಚ್ಚಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

ಅನಂತನಾಗ್ ಜಿಲ್ಲೆಯ ಚೆವಾ ಉಲ್ಲಾರ ಗ್ರಾಮದಲ್ಲಿ ಉಗ್ರರು ಅವಿತಿರುವ ಮಾಹಿತಿ ಪಡೆದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆಯ ಯೋಧರು ಜಂಟಿ ಕಾರ್ಯಾಚರಣೆ ನಡೆಸಿ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ.

Comments