ಕೈ ಸೇರಿತು ಡಿ ಕೆ ಶಿವಕುಮಾರ್ ಕೊರೊನಾ ರಿಪೋರ್ಟ್.! ಇನ್ನಷ್ಟು ಕೈ ನಾಯಕರು ಟೆಸ್ಟ್‌ಗೆ ಸಜ್ಜು!

ಕುಣಿಗಲ್‌ ಶಾಸಕ ಡಾ| ರಂಗನಾಥ್‌ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್‌ ನಾಯಕರು ಕೊರೋನಾ ಪರೀಕ್ಷೆಗೆ ಮುಂದಾಗಿದ್ದಾರೆ. ಜುಲೈ 2ರಂದು ನಡೆದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಹಲವು ಬಾರಿ ಶಾಸಕ ರಂಗನಾಥ ಭೇಟಿ ನೀಡಿದ್ದರು. ಅಲ್ಲದೇ ಡಿ.ಕೆ.ಶಿವಕುಮಾರ್‌ ಪದಗ್ರಹಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಕೊರೋನಾ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್‌ ನಾಯಕರಲ್ಲಿ ಆತಂಕ ಶುರುವಾಗಿದ್ದು, ಪರೀಕ್ಷೆ ಮಾಡಿಸಿಕೊಳ್ಳಲು ತೀರ್ಮಾನಿಸಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು ಫಲಿತಾಂಶ ನೆಗೆಟಿವ್‌ ಬಂದಿದೆ. ಅದಕ್ಕೂ ಮೊದಲು ಕೂಡ ಕೋವಿಡ್‌ ಟೆಸ್ಟ್‌ಗೆ ಒಳಗಾಗಿದ್ದಾಗಲೂ ವರದಿ ನೆಗೆಟಿವ್‌ ಬಂದಿತ್ತು. ಈ ನಡುವೆ ಮಂಗಳವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಸೇರಿದಂತೆ ಕೆಪಿಸಿಸಿ ಕಚೇರಿ ಸಿಬ್ಬಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 35 ಸಿಬ್ಬಂದಿಗಳು ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಒಂದೆರಡು ದಿನಗಳಲ್ಲಿ ಫಲಿತಾಂಶ ಬರಲಿದ್ದು, ಸಿಬ್ಬಂದಿ  ಸದ್ಯ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ.

ಕುಣಿಗಲ್‌ ಶಾಸಕ ರಂಗನಾಥ್‌ಗೆ ಕೊರೋನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು ಫಲಿತಾಂಶ ನೆಗೆಟಿವ್‌ ಬಂದಿದೆ. ಅದಕ್ಕೂ ಮೊದಲು ಕೂಡ ಕೋವಿಡ್‌ ಟೆಸ್ಟ್‌ಗೆ ಒಳಗಾಗಿದ್ದಾಗಲು ಗಲೂ ವರದಿ ನೆಗೆಟಿವ್‌ ಬಂದಿತ್ತು. ಅವರ ಸೋದರ, ಸಂಸದ ಡಿ.ಕೆ.ಸುರೇಶ್‌ ಅವರು ಹೋಮ್‌ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ಅಪ್ತ ಮೂಲಗಳು ತಿಳಿಸಿವೆ.

ಕೃಪೆ: ಸುವರ್ಣ ನ್ಯೂಸ್

Comments