ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
'ನನಗೆ ಕೊರೋನ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದೇನೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದಿಂದ ನಾನು ಗುಣಮುಖನಾಗುತ್ತೇನೆ' ಎಂದವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.