ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಕೋವಿಡ್-19 ತಗುಲಿರುವುದು ಶನಿವಾರ ದೃಢಪಟ್ಟಿದ. ಸದ್ಯ ಅವರನ್ನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನದ ಹಿಂದಷ್ಟೇ ಶಾಸಕ ಕೌಜಲಗಿ ಅವರು ತಾಲೂಕು ಮಟ್ಟದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನದ ಹಿಂದಷ್ಟೇ ಶಾಸಕ ಕೌಜಲಗಿ ಅವರು ತಾಲೂಕು ಮಟ್ಟದ ಕೋವಿಡ್ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದು, ಅವರ ಸಂಪರ್ಕದಲ್ಲಿದ್ದ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ತಾಲ್ಲೂಕು ವೈದ್ಯಾಧಿಕಾರಿ ಡಾ.ಎಸ್.ಎಸ್. ಸಿದ್ದಣ್ಣವರ, ಶಾಸಕರು ಗುರುವಾರ ನಡೆಸಿದ್ದ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಚನ್ನಮ್ಮನ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಸೇರಿದಂತೆ 20ಕ್ ಹೆಚ್ಚು ಅಧಿಕಾರಿಗಳಿಗೆ ಹೋಮ್ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ ಎಂದು ತಿಳಿಸಿದರು. ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಅವರಿಗೂ ಸಹ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮತ್ತು ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿ ಕೂಡ ಕೊರೋನಾದಿಂದ ಗುಣಮುಖರಾಗಿದ್ದು,ಇನ್ನು ಕೆಲ ಶಾಸಕರು ಮತ್ತು ಸಂಸದರು ಚಿಕಿತ್ಸೆ ಪಡೆಯುತ್ತಿದ್ದಾರೆ.