ಕಾಂಗ್ರೆಸ್ ಗೆ ಮತ್ತೊಂದು ಹೊಡೆತ! ಕಾಂಗ್ರೆಸನ್ನು ಬಿಟ್ಟು ಬಿಜೆಪಿಗೆ ಸೇರಿದ ಶಾಸಕ.ಇನ್ನುಈ ಆರು ಜನ ಬಿಜೆಪಿಗೆ ಬರಲಿದ್ದಾರೆ. ಒಂದು ಕಡೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿನ ಸ್ಥಿತಿಗೆ ತಲುಪಿದ್ದರೆ ಇತ್ತ ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ಗೆ ಮತ್ತೊಂದು ಹೊಡೆತ ಬಿದ್ದಿದೆ.
ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಹೆಚ್ಚಾಗಿದ್ದು, ಇದೀಗ ಆಡಳಿತಾ ರೂಡ ಕಾಂಗ್ರೆಸ್ ಪಕ್ಷ ಇಂದು ಮತ್ತೊಂದು ಸಭೆ ಕರೆದಿದ್ದು, ಸಭೆಗೆ ಹಾಜರಾಗುವಂತೆ ಬಂಡಾಯ ನಾಯಕ ಸಚಿನ್ ಪೈಲಟ್ ಅವರಿಗೂ ಆಹ್ವಾನ ನೀಡಿದೆ.
ಈ ಕುರಿತು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಮಾಹಿತಿ ನೀಡಿದ್ದು, 'ಸಿಎಂ ಅಶೋಕ್ ಗೆಹ್ಲೋಟ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ 109 ಬಹುಮತ ಹೊಂದಿದೆ, ನಮ್ಮ ಎಲ್ಲ ಶಾಸಕರು ಬೆಂಬಲಿಸಿ ಪತ್ರ ನೀಡಿದ್ದಾರೆ. ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮತ್ತೊಂದು ಸಭೆ ನಾಳೆ ಬೆಳಿಗ್ಗೆ 10ಕ್ಕೆ ಕರೆಯಲಾಗಿದೆ. ಸಚಿನ್ ಪೈಲಟ್ ಹಾಗೂ ಎಲ್ಲ ಶಾಸಕರು ಹಾಜರಾಗುವಂತೆ ಕೇಳುತ್ತಿದ್ದೇವೆ ಎಂದು ಹೇಳಿದರು.ಇಲ್ಲಿ ಯಾವುದೇ ಭಿನ್ನತೆ ಇದ್ದರೂ ಮುಚ್ಚಿಟ್ಟುಕೊಳ್ಳದೆ ನೇರವಾಗಿ ಹೇಳಬೇಕು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಲ್ಲರ ಮಾತುಗಳನ್ನೂ ಕೇಳಿ, ಪರಿಹಾರ ಕಂಡುಕೊಳ್ಳಲು ಸಿದ್ಧರಿದ್ದಾರೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

Comments
Post a Comment