ಇದೀಗ ಬಂದ ಸುದ್ದಿ: ಇಷ್ಟು ಜನ ಕಾಂಗ್ರೆಸ್‌ ನಾಯಕರನ್ನು ಬಂಧಿಸಿದ ಪೊಲೀಸರು.

ನವದೆಹಲಿ: ಇಲ್ಲಿನ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಯತ್ನಿಸಿದ ಕಾಂಗ್ರೆಸ್‌ನ‌ ದೆಹಲಿ ಘಟಕದ ಮುಖ್ಯಸ್ಥ ಅನಿಲ್‌ ಕುಮಾರ್‌ ಸೇರಿದಂತೆ ಇತರೆ ನಾಯಕರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
'ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವದ ಮೂಲಕ ಆರಿಸಲ್ಪಟ್ಟ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಬಿಜೆಪಿಯ 'ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನ ವಿರೋಧಿ' ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದೆವು' ಎಂದು ಅನಿಲ್‌ ಕುಮಾರ್‌ ತಿಳಿಸಿದರು.
'ಬಿಜೆಪಿಯು ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವವನ್ನು ಹೇಗೆ ಹತ್ಯೆ ಮಾಡುತ್ತಿದೆ ಎಂಬುದನ್ನು ಲೆಫ್ಟನೆಂಟ್‌ ಗರ್ವನರ್‌ಗೆ ತಿಳಿಸುವುದು ನಮ್ಮ ಮುಖ್ಯ ಗುರಿಯಾಗಿತ್ತು. ಆದರೆ ಮೆರವಣಿಗೆಯಲ್ಲಿ ಅವರ ಕಚೇರಿಗೆ ತಲುಪುವ ಮುನ್ನವೇ ಪೊಲೀಸರು ನಮ್ಮನ್ನು ಲುಡ್ಲೊ ಕ್ಯಾಸಲ್‌ ಶಾಲೆ ಬಳಿ ಬಂಧಿಸಿ, ಮಾರಿಸ್ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು ಎಂದು ಅವರು ತಿಳಿಸಿದರು.
ರಾಜಸ್ಥಾನ ಸರ್ಕಾರವನ್ನು ಉರುಳಿಸಲು ಬಿಜೆಪಿ ‍ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೋಮವಾರ ದೇಶವ್ಯಾಪ್ತಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಕಾಂಗ್ರೆಸ್‌ ಘಟಕವು ಲೆಫ್ಟಿನೆಂಟ್‌ ಗರ್ವನರ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು.