ಬ್ರೇಕಿಂಗ್‌ ನ್ಯೂಸ್: ಡಿಕೆಶಿಯನ್ನು ಕಾಂಗ್ರೆಸ್​ ನಾಯಕರೇ ಮುಳುಗಿಸಲಿದ್ದಾರೆ, ಭವಿಷ್ಯ ನುಡಿದ ನಳಿನ್ ಕುಮಾರ್ ಕಟೀಲ್‌.





ಬೆಂಗಳೂರು:
 ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರನ್ನು ಕಾಂಗ್ರೆಸ್ ನಾಯಕರೇ ಮುಳುಗಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಪದಗ್ರಹಣ ಕಾರ್ಯಕ್ರಮದ ಮೂಲಕ ಆರಂಭಿಕ ಶೂರತ್ವ ಮೆರೆದಿದ್ದಾರೆ. ಅದರಿಂದ ಬಿಜೆಪಿ ಮುಕ್ತವಲ್ಲ, ಡಿಕೆ ಶಿವಕುಮಾರ್‌ ಮುಕ್ತ ಕಾಂಗ್ರೆಸ್ ಆಗಲಿದೆ ಎಂದರು.

ಕಾಂಗ್ರೆಸ್ ವ್ಯಕ್ತಿಕೇಂದ್ರಿತ ಪಕ್ಷವಾಗಿದ್ದು ಬಿಜೆಪಿ ಕೇಡರ್ ಆಧಾರಿತ ಪಕ್ಷವಾಗಿದೆ. ಕಾಂಗ್ರೆಸ್ ಎಂಬ ಮುಳಗುವ ಹಡುಗನ್ನು ಡಿಕೆಶಿ ಹತ್ತಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಎಲ್ಲಾ ಕಾಂಗ್ರೆಸ್ ನಾಯಕರು ಸೇರಿಕೊಂಡು ಡಿ.ಕೆ ಶಿವಕುಮಾರ್ ಅವರನ್ನು ಮುಳುಗಿಸುತ್ತಾರೆ ಕಾದುನೋಡಿ ಎಂದು ನಳಿನ್ ಕುಮಾರ್ ಕಟೀಲ್ ಕುಟುಕಿದ್ದಾರೆ.

ಜುಲೈ 2 ರಂದು ಡಿಕೆ ಶಿವಕುಮಾರ್‌ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಕೆಪಿಸಿಸಿ ನೂತನ ಕಚೇರಿಯಲ್ಲಿ ಅದ್ದೂರಿಯಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ್ದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ಘೋಷಣೆಯನ್ನು ಮಾಡಿದ್ದರು.

Comments