Posted by
Redcraft
on
- Get link
- X
- Other Apps
ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಚುನಾವಣಾಪೂರ್ಣ ಮೈತ್ರ ಮಾಡದೆ ಇದ್ದಿದ್ದರೆ ಕಾಂಗ್ರೆಸ್ 7 ರಿಂದ 8 ಸ್ಥಾನಗಳನ್ನು ಗೆಲ್ಲುತ್ತಿತ್ತು ಎಂದು ಕಾಂಗ್ರೆಸ್ಶಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.ರಿಂದ 8 ಸ್ಥಾನಗಳನ್ನು ಗೆಲ್ಲುತ್ತಿತ್ತು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆಗಿನ ಮೈತ್ರಿ ವಿಚಾರವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಪ್ರಸ್ತಾಪಿಸಿದ್ದಾರೆ. ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ ಕನಿಷ್ಠ 7 ರಿಂದ 8 ಸ್ಥಾನಗಳನ್ನು ಗೆಲ್ಲುತ್ತಿದ್ದೆವು ಎನ್ನುವ ಮೂಲಕ ಹೈಕಮಾಂಡ್ ಅಂದು ತೆಗೆದುಕೊಂಡ ನಿರ್ಧಾರವನ್ನು ವಿರೋಧಿಸಿದ್ದಾರೆ.
“ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾಪೂರ್ವ ಮೈತ್ರಿ ಬೇಡ ಎಂದು ನಾನೂ ಹೇಳಿದ್ದೆ. ಇದರಿಂದ ನಿರೀಕ್ಷಿಸಿದ ಹಾಗೆ ಮತ ಧ್ರುವೀಕರಣ ಆಗುವುದಿಲ್ಲ ಎಂಬುದು ನನ್ನ ಲೆಕ್ಕಾಚಾರವಾಗಿತ್ತು. ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ ಕನಿಷ್ಠ 7 ರಿಂದ 8 ಸ್ಥಾನಗಳನ್ನು ಗೆಲ್ಲುತ್ತಿದ್ದೆವು” ಎಂಬ ಸಿದ್ದರಾಮಯ್ಯ ಟ್ವೀಟ್ ಕುತೂಹಲ ಕೆರಳಿಸಿದೆ.
ಜುಲೈ 2 ರಂದು ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಭಾಷಣದಲ್ಲೂ ಈ ವಿಚಾರವನ್ನು ಉಲ್ಲೇಖ ಮಾಡಿದ್ದರು. ಮುಂದಿನ ದಿನಗಳಲ್ಲಿ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಇದೀಗ ಸಿದ್ದರಾಮಯ್ಯ ಕೂಡಾ ಮೈತ್ರಿಗೆ ವಿರುದ್ಧವಾದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಪ್ರಮುಖ ಕಾರಣಕರ್ತರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಜೆಡಿಎಸ್ ಜೊತೆಗಿನ ಮೈತ್ರಿ ವಿರೋಧಿ ಹೇಳಿಕೆ ಕುತೂಹಲ ಕೆರಳಿಸಿದೆ.
- Get link
- X
- Other Apps

Comments
Post a Comment